ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

Sampriya
ಶನಿವಾರ, 5 ಜುಲೈ 2025 (14:26 IST)
Photo Credit X
ಹೈದರಾಬಾದ್‌: ಬ್ಯಾಂಕ್ ಹಗರಣ ಪ್ರಕರಣವೊಂದರಲ್ಲಿ ನಟ ಅಲ್ಲು ಅರ್ಜುನ್ ತಂದೆ, ಟಾಲಿವುಡ್‌ ನಿರ್ಮಾಪಕ  ಅಲ್ಲು ಅರವಿಂದ್ ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಅಲ್ಲು ಅರವಿಂದ್ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ರಾಮಕೃಷ್ಣ ಎಲೆಕ್ಟ್ರಾನಿಕ್ಸ್‌ ಸಂಸ್ಥೆಗೆ ಸಂಬಂಧಿಸಿದ ₹ 101 ಕೋಟಿ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಲ್ಲು ಅರವಿಂದ್ ಅವರನ್ನು ಇಡಿ ವಿಚಾರಣೆ ಎದುರಿಸುವಂತಾಗಿತ್ತು. 2018-19ರ ನಡುವೆ ನಡೆದ ಬ್ಯಾಂಕ್ ವಹಿವಾಟುಗಳ ಸಮಯದಲ್ಲಿ ವಂಚನೆ ನಡೆದಿತ್ತು ಎಂದು ವರದಿಯಾಗಿದೆ.

ರಾಮಕೃಷ್ಣ ಎಲೆಕ್ಟ್ರಾನಿಕ್ಸ್‌, ಆರ್‌ಟಿಪಿಎಲ್‌ ಕಂಪನಿ ಮಾಲೀಕರು ಸಾಲದ ಹಣವನ್ನು ತಮ್ಮ ಸ್ವಂತ ಲಾಭಕ್ಕಾಗಿ ಮತ್ತು ಅಕ್ರಮ ಹಣ ವರ್ಗಾವಣೆಗಾಗಿ ಬಳಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುತಿಸಿದೆ. ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಮತ್ತು ಅಲ್ಲು ಅರವಿಂದ್ ಒಡೆತನದ ಕಂಪನಿಗಳ ನಡುವೆ ಕೆಲವು ಅನುಮಾನಾಸ್ಪದ ಹಣಕಾಸಿನ ವಹಿವಾಟುಗಳು ನಡೆದಿರುವುದು ಕಂಡುಬಂದಿದೆ.

ವಹಿವಾಟುಗಳ ಕುರಿತು ಸ್ಪಷ್ಟೀಕರಣ ಕೋರಿ ಜಾರಿ ನಿರ್ದೇಶನಾಯ ಅರವಿಂದ್‌ ಅವರಿಗೆ ನೋಟಿಸ್ ನೀಡಿದೆ. ಮುಂದಿನ ವಾರ ಮತ್ತೊಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಆದೇಶಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕರ್ನೂಲ್, ಹೈದರಾಬಾದ್ ಮತ್ತು ಗಾಜಿಯಾಬಾದ್ ಪ್ರದೇಶಗಳಲ್ಲಿ ಶೋಧ ನಡೆಸಿದರು. ಸಂಸ್ಥೆಗಳ ನಿರ್ದೇಶಕರು ಮತ್ತು ಪಾಲುದಾರ ವಿ. ರಾಘವೇಂದ್ರ, ವಿ. ರವಿ ಕುಮಾರ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಪ್ರಕರಣದ ಆರೋಪಿಗಳಾಗಿರುವ ವಿ. ರಾಘವೇಂದ್ರ ಮತ್ತು ವಿ. ರವಿ ಕುಮಾರ್ ಜೊತೆಗಿನ ಅಲ್ಲು ಅರವಿಂದ್ ಒಡನಾಟ, ಆಸ್ತಿ ಖರೀದಿ ಸಂಬಂಧ ತನಿಖೆ ನಡೆಯುತ್ತಿದೆ. ಸಾಕಷ್ಟು ಪ್ರಶ್ನೆಗಳನ್ನು ಸಿದ್ಧಪಡಿಸಿ ಇಡಿ ಅಧಿಕಾರಿಗಳು ಅಲ್ಲು ಅರವಿಂದ್ ಉತ್ತರವನ್ನು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಅಲ್ಲು ಅರವಿಂದ್ ಹೇಳಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments