ಸಲ್ಮಾನ್ ಖಾನ್ ಕುಟುಂಬ ಭೇಟಿ ಮಾಡಿದ ಬಿಜೆಪಿ ಶಾಸಕ ಆಶಿಶ್ ಶೆಲಾರ್

Sampriya
ಸೋಮವಾರ, 8 ಏಪ್ರಿಲ್ 2024 (19:43 IST)
Photo Courtesy X
ಮುಂಬೈ: ಲೋಕಸಭೆ ಚುನಾವಣೆಗೆ ತಿಂಗಳಷ್ಟೇ ಬಾಕಿಯಿರುವಾಗ ಬಾಲಿವುಡ್ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್ ಹಾಗೂ ಅವರ ಕುಟುಂಬದವರನ್ನು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಭೇಟಿ ಮಾಡಿ ಮಾತುಕತೆ ನಡೆಸಿದರು.

ಆಶಿತ್ ಅವರು ನಿರ್ಗತಿಕರಿಗೆ ನೆರವು, ಆರೋಗ್ಯ ಕ್ಷೇತ್ರ ಸೇರಿದಂತೆ ಅವರ ಸಲ್ಮಾನ್ ಕುಟುಂಬ ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಕುರಿತಂತೆ ಚರ್ಚಿಸಿದ್ದಾರೆ.

ಸಲ್ಮಾನ್‌ ಖಾನ್ ಮತ್ತು ಅವರ ಕುಟುಂಬದವರನ್ನು ಭೇಟಿಯಾದ ಫೋಟೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಆಶಿಶ್ ಶೆಲಾರ್ ಹಂಚಿಕೊಂಡಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು,' ಸಲ್ಮಾನ್‌ ಖಾನ್‌ ಕುಟುಂಬವು ಎರಡು ದಶಕಗಳಿಂದಲೂ ಅತ್ಯಂತ ಪ್ರಾಮಾಣಿಕವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದ ಮೂಲಕ ಅನೇಕ ಜನರಿಗೆ ನೆರವಿನ ಹಸ್ತ ಚಾಚಿದೆ. ಇಂತಹ ಕುಟುಂಬದೊಂದಿಗೆ ಸಮಯ ಕಳೆದಿದ್ದು ಬಹಳ ಸಂತಸ ತಂದಿದೆ' ಎಂದು ಶೆಲಾರ್ ಬರೆದುಕೊಂಡಿದ್ದಾರೆ.

ಮುಂಬೈನ 6 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಮಹಾರಾಷ್ಟ್ರವು ಒಟ್ಟು 48 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments