Publish Date: Tue, 27 Oct 2026 (10:32 IST)
Updated Date: Tue, 27 Oct 2026 (10:34 IST)
ಬೆಂಗಳೂರು: ಸ್ಯಾಂಡಲ್‌ವುಡ್‌ನ ನೆಚ್ಚಿನ ನಟ, 'ಚಾಲೆಂಜಿಂಗ್ ಸ್ಟಾರ್' ದರ್ಶನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಟ ಧನ್ವೀರ್‌ಗೌಡ ಅವರನ್ನು ದರ್ಶನ್ ಅವರ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಿಂದ ಬ್ಲಾಕ್ ಮಾಡಲಾಗಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಧನ್ವೀರ್‌ಗೌಡ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕಿರುವ ಮಾರ್ಮಿಕ ಪೋಸ್ಟ್ ಒಂದು ಇದೀಗ ಗಾಂಧಿನಗರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ದರ್ಶನ್ ಅವರ ಇನ್‌ಸ್ಟಾಗ್ರಾಮ್ ಹಾಗೂ ಸೋಷಿಯಲ್ ಮೀಡಿಯಾ ಖಾತೆಗಳನ್ನು ಪ್ರಸ್ತುತ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರೇ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ, ಧನ್ವೀರ್ ಅವರನ್ನು ಬ್ಲಾಕ್ ಮಾಡಿರುವುದರ ಹಿಂದೆ ವಿಜಯಲಕ್ಷ್ಮಿ ಅವರ ಕೈವಾಡವಿದೆ ಎಂಬ ವದಂತಿಗಳು ಹರಿದಾಡುತ್ತಿವೆ.
"ನನ್ನ ಮನಸ್ಸಿನಿಂದ ಅವರನ್ನು ಬ್ಲಾಕ್ ಮಾಡಲು ಸಾಧ್ಯವಿಲ್ಲ": ಧನ್ವೀರ್
ತಮ್ಮನ್ನು ಬ್ಲಾಕ್ ಮಾಡಿದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರೋಕ್ಷವಾಗಿ ತಿರುಗೇಟು ನೀಡಿರುವ ಧನ್ವೀರ್, "ನೀವು ನನ್ನನ್ನು ದರ್ಶನ್ ಅವರ ಸೋಷಿಯಲ್ ಮೀಡಿಯಾ ಖಾತೆಯಿಂದ ಬ್ಲಾಕ್ ಮಾಡಿರಬಹುದು, ಆದರೆ ನನ್ನ ಮನಸ್ಸಿನಿಂದ ಅವರನ್ನು ಎಂದಿಗೂ ಬ್ಲಾಕ್ ಮಾಡಲು ನಿಮ್ಮಿಂದ ಸಾಧ್ಯವಿಲ್ಲ!" ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ಧನ್ವೀರ್ ಅವರ ಈ ಪೋಸ್ಟ್ ನೇರವಾಗಿ ವಿಜಯಲಕ್ಷ್ಮಿ ದರ್ಶನ್ ಅವರಿಗೇ ನೀಡಿದ ಪರೋಕ್ಷ ಕೌಂಟರ್ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.
ದರ್ಶನ್ ಆಪ್ತರ ನಡುವೆ ಬಿರುಕು?
ದರ್ಶನ್ ಅವರ ಕಷ್ಟದ ಸಮಯದಲ್ಲಿ ಜೊತೆಗಿದ್ದ ನಿಕಟವರ್ತಿಗಳು ಮತ್ತು ಕುಟುಂಬದ ನಡುವೆ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳು ಮೂಡಿವೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈಗ ಧನ್ವೀರ್ ಅವರ ಇನ್ಸ್ಟಾಗ್ರಾಮ್ ಪೋಸ್ಟ್ ಈ ಅನುಮಾನಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ. ಈ ವಿಚಾರವಾಗಿ ವಿಜಯಲಕ್ಷ್ಮಿ ಅವರಾಗಲಿ ಅಥವಾ ದರ್ಶನ್ ಅವರ ತಂಡವಾಗಲಿ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ