ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

Sampriya
ಭಾನುವಾರ, 15 ಜೂನ್ 2025 (10:03 IST)
Photo Courtesy X
ಉಡುಪಿ: ಜಿಲ್ಲೆಯ ಸುತ್ತಮುತ್ತ ಕಾಂತಾರ ಚಾಪ್ಟರ್‌ 1 ಸಿನಿಮಾದ ಶೂಟಿಂಗ್‌ ಭರದಿಂದ ಸಾಗುತ್ತಿದೆ. ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಈ ಸಿನಿಮಾಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ. 

ಎರಡು ದಿನಗಳ ಹಿಂದೆ ಶೂಟಿಂಗ್‌ ಸೆಟ್‌ನಲ್ಲಿ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಶೂಟಿಂಗ್‌ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಕಾಂತಾರ-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆದಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್‌ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments