ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟಿ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹದ ಪ್ರತಿಜ್ಞೆ ವಿನಿಮಯ ಮಾಡಿಕೊಂಡರು.
ಸದ್ಯ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮದುವೆಯಲ್ಲಿ ವಧು ಅದಿತಿ ಅವರು ಗೋಲ್ಡನ್ ಸೀರೆಯಲ್ಲಿ ಮಿಂಚಿದರೆ, ವರ ಸಿದ್ಧಾರ್ಥ್ ಬಿಳಿ ಕುರ್ತಾ ಧರಿಸಿದ್ದರು.
ಅದಿತಿ ಮತ್ತು ಸಿದ್ಧಾರ್ಥ್ ಈ ವರ್ಷದ ಮಾರ್ಚ್‌ನಲ್ಲಿ ತಮ್ಮ ನಿಶ್ಚಿತಾರ್ಥವನ್ನು ಹೃತ್ಪೂರ್ವಕವಾಗಿ ಇನ್‌ಸ್ಟಾಗ್ರಾಂ ಪೋಸ್ಟ್‌ನೊಂದಿಗೆ ಅಧಿಕೃತವಾಗಿ ಘೋಷಿಸಿದರು.