ಬೆಂಗಳೂರು: ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ನಲ್ಲಿ ನಟಿಸಿರುವ ಬನಾರಸ್ ಸಿನಿಮಾಗೆ ಬಹಿಷ್ಕಾರದ ಭೀತಿ ಎದುರಾಗಿದೆ.
ಜಮೀರ್ ಇತ್ತೀಚೆಗೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಲು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವರು ಈಗ ಸೋಷಿಯಲ್ ಮೀಡಿಯಾದಲ್ಲಿ ಜಮೀರ್ ಪುತ್ರನ ಸಿನಿಮಾ ಬಹಿಷ್ಕರಿಸುವ ಮೂಲಕ ತಿರುಗೇಟು ನೀಡಲು ಮುಂದಾಗಿದ್ದಾರೆ.
ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾದಲ್ಲಿ ಪೋಸ್ಟರ್ ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಅಪವಾದವೂ ಕೇಳಿಬಂದಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಜಮೀರ್ ಪುತ್ರನ ಸಿನಿಮಾವನ್ನು ಬಹಿಷ್ಕರಿಸುವಂತೆ ಕೆಲವರು ಕರೆ ಕೊಟ್ಟಿದ್ದಾರೆ.