Publish Date: Tue, 07 Apr 2020 (09:20 IST)
Updated Date: Tue, 07 Apr 2020 (09:22 IST)
ಬೆಂಗಳೂರು: ನಿನ್ನೆ ಸಂಜೆ ನಿಧನರಾದ ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅಂತ್ಯ ಕ್ರಿಯೆ ಇಂದು ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಲಿದೆ.
ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಆದರೆ ಕೊರೋನಾವೈರಸ್ ಕಾರಣದಿಂದಾಗಿ ನೂಕು ನುಗ್ಗಲು ಉಂಟಾಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಅಂತಿಮ ದರ್ಶನ ಪಡೆಯಲು ಸೂಚನೆ ನೀಡಲಾಗಿದೆ.
ಇಂದು ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕೇವಲ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.