Publish Date: Fri, 23 Mar 2018 (09:35 IST)
Updated Date: Fri, 23 Mar 2018 (09:37 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ಮಾಪಕನ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಜೆಡಿ ಚಿತ್ರದ ನಟ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಹೇಮಾವತಿ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ತಮ್ಮ ಬಳಿ ಕೆಲ ದಿನಗಳ ಹಿಂದೆ ಫಾರ್ಚ್ಯೂನ್ ಕಾರು ಪಡೆದಿದ್ದ ಜಗದೀಶ್ ನಂತರ ಮರಳಿಸಲಿಲ್ಲ ಎಂದು ಆರೋಪಿಸಿದ್ದಾರೆ.
ಈಗ ಕಾರು ಕೇಳಲು ಹೋದರೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಹೇಮಾವತಿ ಬರೆದಿದ್ದಾರೆ. ಇದೀಗ ಜಗದೀಶ್ ಗಾಗಿ ಪೊಲೀಸರು ಹುಡುಕಾಡುತ್ತಿದ್ದು, ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವ ಸಂಭವವಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ