Publish Date: Tue, 08 Sep 2020 (10:02 IST)
Updated Date: Tue, 08 Sep 2020 (10:03 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಹೀಗಾಗಿ ಸಂಜನಾ ಕೂಡಾ ಈಗ ಬಂಧನ ಭೀತಿಯಲ್ಲಿದ್ದಾರೆ.
ಇಂದು ಬೆಳಿಗ್ಗೆ ಸಂಜನಾ ಅಪಾರ್ಟ್ ಮೆಂಟ್ ಗೆ ಆಗಮಿಸಿದ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಕೆಲವು ವಸ್ತುಗಳನ್ನು ವಶಪಡಿಸಿಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರಷ್ಟೇ. ಒಂದು ವೇಳೆ ಅಗತ್ಯ ಬಂದರೆ ಬಂಧಿಸುವ ಸಾಧ‍್ಯತೆಯಿದೆ. ಈ ನಡುವೆ ಬಂಧನ ಭೀತಿಯಲ್ಲಿರುವ ಸಂಜನಾ ನಿರೀಕ್ಷಣಾ ಜಾಮೀನಿಗಾಗಿ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.
ಬೆಳಿಗ್ಗೆಯಿಂದಲೇ ಸಂಜನಾ ಮನೆಯಲ್ಲಿ ಬೀಡುಬಿಟ್ಟಿರುವ ಸಿಸಿಬಿ ಅಧಿಕಾರಿಗಳು ಪ್ರಿಂಟರ್ ತರಿಸಿಕೊಂಡಿದ್ದಾರೆ. ಅಲ್ಲಿ ಕೆಲವೊಂದು ವಸ್ತುಗಳು ಸಾಕ್ಷ್ಯಾಧಾರಗಳು ಸಿಕ್ಕಿವೆ ಎನ್ನಲಾಗಿದೆ.