Publish Date: Fri, 04 Sep 2020 (09:24 IST)
Updated Date: Fri, 04 Sep 2020 (09:26 IST)
ಬೆಂಗಳೂರು: ಡ್ರಗ್ ಮಾಫಿಯಾಗೆ ನಂಟಿದೆ ಎಂಬ ಅನುಮಾನದ ಮೇರೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರೂ ಕಾಲಾಕಾಶ ಕೋರಿದ್ದ ನಟಿ ರಾಗಿಣಿ ದ್ವಿವೇದಿ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಹಲವು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೂ ನೋಟಿಸ್ ನೀಡಲಾಗಿತ್ತು. ಆದರೆ ವೈಯಕ್ತಿಕ ಕಾರಣ ನೀಡಿ ವಕೀಲರ ಮೂಲಕ ರಾಗಿಣಿ ಕಾಲಾವಕಾಶ ಕೋರಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು.
ಆದರೆ ಅವರು ಸಾಕ್ಷ್ಯ ನಾಶಪಡಿಸುವ ಸಾಧ‍್ಯತೆಯಿರುವುದರಿಂದ ಇಂದು ಬೆಳಗ್ಗೆಯೇ ಸಿಸಿಬಿ ಪೊಲೀಸರು ಅವರ ಮನೆಗೆ ದಾಳಿ ನಡೆಸಿದ್ದಾರೆ. ಆದರೆ ರಾಗಿಣಿ ತಮ್ಮ ಮೊಬೈಲ್ ನಲ್ಲಿದ್ದ ವ್ಯಾಟ್ಸಪ್ ಹಿಸ್ಟರಿಗಳನ್ನೆಲ್ಲಾ ಡಿಲೀಟ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಆಕೆ ಎಸ್ಕೇಪ್ ಆಗಲು ಪ್ಲ್ಯಾನ್ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಬಂದಿದೆ.