Publish Date: Wed, 02 Sep 2020 (11:29 IST)
Updated Date: Wed, 02 Sep 2020 (11:30 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಕುರಿತಂತೆ ಮೊನ್ನೆಯಷ್ಟೇ ಸಿಸಿಬಿ ಪೊಲೀಸರ ಮುಂದೆ ಹಾಜರಾಗಿ ಮಾಹಿತಿ ನೀಡಿದ್ದ ಇಂದ್ರಜಿತ್ ಲಂಕೇಶ್ ಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿದೆ.
ಇಂದ್ರಜಿತ್ ಮೊನ್ನೆ ತಮ್ಮ ಆರೋಪಗಳಿಗೆ ಸಾಕ್ಷ್ಯ ನೀಡಿರಲಿಲ್ಲ. ಬದಲಾಗಿ ಡ್ರಗ್ ಬಳಕೆ ಮಾಡುವ ಬಗ್ಗೆ ತಮಗೆ ಅನುಮಾನವಿರುವ ನಟ-ನಟಿಯರ ಹೆಸರುಗಳನ್ನಷ್ಟೇ ಹೇಳಿದ್ದಾರೆ. ಹೀಗಾಗಿ ಅವರು ಮಾಡಿರುವ ಆರೋಪಕ್ಕೆ ಸಾಕ್ಷ್ಯ ಒದಗಿಸಲು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇದನ್ನು ಖುದ್ದು ಇಂದ್ರಜಿತ್ ಲಂಕೇಶ್ ಸ್ಪಷ್ಟಪಡಿಸಿದ್ದು, ನಾಳೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.