ಬೆಂಗಳೂರು: ಡ್ರಗ್ ಮಾಫಿಯಾ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ ಬೆನ್ನಲ್ಲೇ ವಕೀಲರ ಮೂಲಕ ನಟಿ ಕಾಲಾವಕಾಶ ಕೋರಿದ್ದಾರೆ.
ರಾಗಿಣಿ ಆಪ್ತ ರವಿಶಂಕರ್ ಅವರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧವಾಗಿ ರಾಗಿಣಿಗೆ ಇಂದು 10 ಗಂಟೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ರಾಗಿಣಿ ಪರ ವಕೀಲರು ತಮ್ಮ ಕಕ್ಷಿದಾರರಿಗೆ ಹುಷಾರಿಲ್ಲ. ಅನಾರೋಗ್ಯ ಕಾರಣದಿಂದ ಅವರಿಗೆ ವಿಚಾರಣೆಗೆ ಹಾಜರಾಗಲು ಎರಡು ದಿನಗಳ ಕಾಲಾವಕಾಶ ಕೊಡಿ ಎಂದು ಕೇಳಿದ್ದಾರೆ.