ನವದೆಹಲಿ: ತೀವ್ರ ವಿವಾದ ಎಬ್ಬಿಸಿರುವ ದಿ ಕೇರಳ ಸ್ಟೋರಿ ಸಿನಿಮಾಗೆ ಸೆನ್ಸಾರ್ ಮಂಡಳಿ 10 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದ್ದು, ಎ ಪ್ರಮಾಣ ಪತ್ರ ನೀಡಿದೆ.
ಮೇ 5 ರಂದು ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆಯಾಗಲಿದೆ. ಸುದಿಪ್ತೊ ಸೇನ್ ಸಿನಿಮಾ ನಿರ್ದೇಶಿಸಿದ್ದು, ಆದಾ ಶರ್ಮಾ ಪ್ರಮುಖ ಪಾತ್ರ ಮಾಡಿದ್ದಾರೆ.
ಈ ಸಿನಿಮಾದಲ್ಲಿ ಲವ್ ಜಿಹಾದ್ ಬಗ್ಗೆ ಹೇಳಲಾಗಿದೆ. ಹೀಗಾಗಿ ಕೇರಳದಲ್ಲಿ ಚಿತ್ರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಆಡಳಿತಾರೂಢ ಸಿಪಿಎಂ ಸೇರಿದಂತೆ ಹಲವು ರಾಜಕೀಯ ನಾಯಕರು ಚಿತ್ರಕ್ಕೆ ತಡೆಯೊಡ್ಡಬೇಕು ಎಂದಿದ್ದಾರೆ. ಆದರೆ ಸುಪ್ರೀಂಕೋರ್ಟ್ ತಡೆ ಒಡ್ಡಲು ನಿರಾಕರಿಸಿತ್ತು. ಇದೀಗ ಸೆನ್ಸಾರ್ ಮಂಡಳಿ ವಿವಾದಾತ್ಮಕ ಅಂಶವಿರುವ 10 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ದೇಶಿಸಿದೆ. ಮೇ 5 ರಂದು ದಿ ಕೇರಳ ಸ್ಟೋರಿ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುತ್ತಿಲ್ಲ.