Daily Horoscope
✕

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಚಾಲೆಂಜಿಂಗ್ ದಿನ

Krishnaveni K
ಸೋಮವಾರ, 28 ಅಕ್ಟೋಬರ್ 2024 (08:48 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದು ಅಕ್ಷರಶಃ ಚಾಲೆಂಜಿಂಗ್ ದಿನವಾಗಿದೆ. ಅವರ ಜಾಮೀನು ಅರ್ಜಿ ಭವಿಷ್ಯ ಇಂದು ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.

ಕೆಳ ಹಂತದ ಕೋರ್ಟ್ ನಲ್ಲಿ ಜಾಮೀನು ತಿರಸ್ಕೃತವಾದ ಬಳಿಕ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಕೋರ್ಟ್ ವಿಚಾರಣೆ ಆರಂಭಿಸಿದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ಇನ್ನೊಂದೆಡೆ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸುತ್ತಿದ್ದಾರೆ.

ಹೈಕೋರ್ಟ್ ಈಗಾಗಲೇ ಒಂದು ಸುತ್ತಿನ ವಿಚಾರಣೆ ನಡೆಸಿದ್ದು ಇಂದಿಗೆ ವಿಚಾರಣೆ ಮುಂದೂಡಿತ್ತು. ಇಂದು ಕೋರ್ಟ್ ನಲ್ಲಿ ತೀರ್ಪು ಬರುವುದು ಅನುಮಾನ. ಹಾಗಿದ್ದರೂ ಕೋರ್ಟ್ ಏನು ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಆತಂಕ ದರ್ಶನ್ ರಲ್ಲಿದೆ. ಪ್ರಕರಣದಲ್ಲಿ ಕೆಲವು ಆರೋಪಿಗಳಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಆದರೆ ಪ್ರಮುಖ ಆರೋಪಿಗಳು ಈಗಲೂ ಬಂಧನದಲ್ಲಿದ್ದಾರೆ.

ನಟ ದರ್ಶನ್ ಗೆ ಬೆನ್ನು ನೋವು ವಿಪರೀತ ಕಾಡುತ್ತಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಅವರ ಪರ ವಕೀಲರು ಮೊನ್ನೆ ಹೈಕೋರ್ಟ್ ಗೆ ಮನವರಿಕೆ ಮಾಡಿದ್ದರು. ಹೀಗಾಗಿ ವೈದ್ಯಕೀಯ ವರದಿ ಸಲ್ಲಿಸಲು ಕೋರ್ಟ್ ಸೂಚಿಸಿತ್ತು. ಇದೀಗ ದರ್ಶನ್ ಅನಾರೋಗ್ಯವೇ ಅವರಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments