Publish Date: Mon, 24 Sep 2018 (07:27 IST)
Updated Date: Mon, 24 Sep 2018 (07:29 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದೆ ಎಂಬುದಾಗಿ ತಿಳಿದುಬಂದಿದೆ.
'ಯಜಮಾನ' ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಮೈಸೂರಿಗೆ ತೆರಳಿದಾಗ ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ನಟ ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದು ಬಂದಿದೆ.
ಇವರ ಕಾರಿನಲ್ಲಿ ಸ್ಯಾಂಡಲ್ ವುಡ್ ನಟರಾದ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಪ್ರಯಾಣಿಸುತ್ತಿದ್ದು, ಅವರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡ ನಟರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.