Webdunia - Bharat's app for daily news and videos

Install App

ಗಾಸಿಪ್ ಗಳಿಗೆ ಇತಿಶ್ರೀ ಹಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಮಂಗಳವಾರ, 10 ಅಕ್ಟೋಬರ್ 2017 (14:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಹೈದರಾಬಾದ್ ನಲ್ಲಿ ತಮ್ಮ 50ನೇ ಚಿತ್ರ ಕುರುಕ್ಷೇತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ತಾರಕ್ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ಇದರ ಮಧ್ಯೆ ದರ್ಶನ್ ಅಭಿನಯದ 51, 52, 53ನೇ ಸಿನಿಮಾ ಬಗ್ಗೆ ಗಾಂಧಿನಗರದಲ್ಲಿ ಚರ್ಚೆ ನಡೆಯುತ್ತಿದೆ.

ಆದರೆ ಇದಕ್ಕೆಲ್ಲ ದರ್ಶನ್ ಫೇಸ್ ಬುಕ್ ಪೋಸ್ಟ್ ಮತ್ತು ಟ್ವೀಟ್ ಮಾಡುವ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. `ತಾರಕ್ ಚಿತ್ರವನ್ನು ಇಷ್ಟು ಪ್ರೀತಿಯಿಂದ ದೊಡ್ಡ ಮಟ್ಟದ ಯಶಸ್ಸು ನೀಡಿ ಒಪ್ಪಿಕೊಂಡಿರುವುದಕ್ಕೆ ಎಲ್ಲರಿಗೂ ನಮ್ಮ ತಂಡದಿಂದ ಕೃತಘ್ನತೆಗಳು. ನಿಮ್ಮ ಪ್ರೀತಿ-ಪ್ರೋತ್ಸಾಹ ನಮ್ಮಂಥ ಚಿಕ್ಕ ಕಲಾವಿದರ ಮೇಲೆ ಸದಾ ಇರಲಿ. ತಾರಕ್ ಆದಮೇಲೆ ನನ್ನ 50ನೇ ಚಿತ್ರ ಕುರುಕ್ಷೇತ್ರ. ಅದರ ವಿವರ ಕೆಲ ತಿಂಗಳ ನಂತರ ನಾನೇ ತಿಳಿಸುವೆ ಎಂದು ಪೋಸ್ಟ್ ಮಾಡಿದ್ದಾರೆ.

`ನಾನು ಕಂಡ ಹಾಗೆ ಮೀಡಿಯಾದಲ್ಲಿ, ಸಾಮಾಜಿಕ ತಾಣಗಳಲ್ಲಿ ನನ್ನ 51, 52, 53ನೇ ಚಿತ್ರಗಳ ಬಗ್ಗೆ ಅನವಶ್ಯಕ ಚರ್ಚೆಗಳು ಮತ್ತು ಗಾಳಿಸುದ್ದಿಗಳು ಸದ್ಯಕ್ಕೆ ಬೇಡ. ಸಮಯ ಬಂದಾಗ ಅದರ ಸಂಪೂರ್ಣ ವಿವರಗಳನ್ನು ಎಲ್ಲರಿಗೂ ತಿಳಿಸುತ್ತೇನೆ. ಈಗ ತಾರಕ್ ಚಿತ್ರಕ್ಕೆ ಬೆನ್ನುತಟ್ಟಿ ನೀವು ತೋರುತ್ತಿರುವ ಪ್ರೀತಿಗೆ ನಾವು ಸದಾ ಚಿರಋಣಿ. ಎಲ್ಲರೂ ತಾರಕ್ ನೋಡಿ ಹರಸಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಮುಂದಿನ ಸುದ್ದಿ
Show comments