Publish Date: Thu, 21 Feb 2019 (09:45 IST)
Updated Date: Thu, 21 Feb 2019 (09:46 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ಮಾರ್ಚ್ 1 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಈ ಚಿತ್ರದ ಟೈಟಲ್ ಬಗ್ಗೆ ಎದ್ದ ವಿವಾದಗಳ ಬಗ್ಗೆ ದರ್ಶನ್ ಮಾತನಾಡಿದ್ದಾರೆ.
ಸಾಹಸಸಿಂಹ ವಿಷ್ಣುವರ್ಧನ್ ದ್ವಿಪಾತ್ರದಲ್ಲಿ ಅಭಿನಯಿಸಿ ಸೂಪರ್ ಹಿಟ್ ಆಗಿದ್ದ ಸಿನಿಮಾ ‘ಯಜಮಾನ’. ಅದೇ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡುವಾಗ ದರ್ಶನ್ ಸಿನಿಮಾ ಬಗ್ಗೆ ವಿವಾದಗಳಾಗಿತ್ತು.
ಇದೀಗ ಅದಕ್ಕೆ ದರ್ಶನ್ ಸ್ಪಷ್ಟನೆ ಕೊಟ್ಟಿದ್ದು, ಯಾವತ್ತಿಗೂ ಕನ್ನಡ ಚಿತ್ರರಂಗಕ್ಕೆ ವಿಷ್ಣು ಸಾರ್ ಒಬ್ಬರೇ ಯಜಮಾನ. ಆ ಸಿನಿಮಾಗೂ ಈ ಸಿನಿಮಾಗೂ ಸಂಬಂಧವಿಲ್ಲ. ಕತೆಗೆ ಹೊಂದಿಕೆಯಾಗುವಂತೆ ಈ ಟೈಟಲ್ ಇಟ್ಟಿದ್ದೇವಷ್ಟೇ. ನಾನು ಇಲ್ಲಿ ಯಜಮಾನನಾಗಿ ಕಾಣಿಸಿಕೊಂಡಿಲ್ಲ. ಸಿನಿಮಾ ನೋಡಿದಾಗ ನಿಮಗೇ ಗೊತ್ತಾಗುತ್ತದೆ. ಇದರ ಹಿಂದೆ ಬೇರೆ ಯಾವುದೇ ಉದ್ದೇಶವಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ