ಬಾಲಿವುಡ್ ನಲ್ಲಿ ಸಾಕಷ್ಟು ಜನ ಫ್ರೆಂಡ್ಸ್ ಬಾ ಅಣ್ಣ ಅಂತ ಕರೀತಾರೆ: ದರ್ಶನ್

Krishnaveni K
ಗುರುವಾರ, 9 ಮೇ 2024 (15:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೇ ಮೊದಲ ಬಾರಿಗೆ ಬಾಲಿವುಡ್ ನಟರ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ತನಗೆ ಯಾವ ಬಾಲಿವುಡ್ ನಟ ಇಷ್ಟ ಎನ್ನುವುದನ್ನು ಹೇಳಿಕೊಂಡಿದ್ದಾರೆ.

ದರ್ಶನ್ ಸಂದರ್ಶನವೊಂದರ ತುಣುಕು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದರ್ಶನ್ ಯಾವತ್ತೂ ಕನ್ನಡ ಸಿನಿಮಾಗಳ ಪರ ಮಾತನಾಡುತ್ತಾರೆ. ಪರಭಾಷೆಗಳಿಗೆ ಹೋಗೋದಿಲ್ಲ. ಕನ್ನಡವೇ ನನಗೆ ಮೊದಲು ಎನ್ನುತ್ತಾರೆ. ಆದರೆ ದರ್ಶನ್ ಗೂ ಬಾಲಿವುಡ್ ಸಿನಿಮಾ ನೋಡುವ ಅಭ್ಯಾಸವಿದೆ ಎಂಬುದು ಈ ವಿಡಿಯೋದಲ್ಲಿ ಬಹಿರಂಗವಾಗಿದೆ.

ದರ್ಶನ್ ತಾನು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಅವರಿಗೆ ಅಮಿತಾಭ್ ಅವರನ್ನು ಒಮ್ಮೆ ಭೇಟಿಯಾಗಬೇಕೆಂಬ ಆಸೆಯಿದೆಯಂತೆ. ಆದರೆ ಅದು ಸಾಮಾನ್ಯ ಭೇಟಿಯಾಗಿರಬಾರದು ಎಂಬ ಆಸೆಯೂ ಇದೆ ಎಂದು ದರ್ಶನ್ ಹೇಳಿಕೊಳ್ಳುವ ವಿಡಿಯೋ ವೈರಲ್ ಆಗಿದೆ.

ಹಿಂದಿಯಲ್ಲೂ ನನಗೆ ಸ್ನೇಹಿತರಿದ್ದಾರೆ. ಅಲ್ಲಿ ಅಭಿನಯಿಸಲು ನನಗೆ ಆಫರ್ ಕೊಡುತ್ತಾರೆ. ಸೌತ್ ಇಂಡಿಯಾ ಸಿನಿಮಾದವರು ಎಂದರೆ ಅವರು ವೆಲ್ ಕಮ್ ಮಾಡಿಯೇ ಮಾಡುತ್ತಾರೆ.  ಜನರ ಮಧ್ಯೆ ನಿಂತು ಅವರನ್ನು ನೋಡಬೇಕು ಎಂದು ದರ್ಶನ್ ಹೇಳುತ್ತಾರೆ.  ಇನ್ನು, ಸಿನಿಮಾ ವಿಚಾರಕ್ಕೆ ಬರುವುದಾದರೆ ದರ್ಶನ್ ಇದೀಗ  ಕಾಟೇರ ಸಕ್ಸಸ್ ಆದ ಬಳಿಕ ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments