Webdunia - Bharat's app for daily news and videos

Install App

ದುಬೈನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿದ ಡಿ ಬಾಸ್ ದರ್ಶನ್, ಪತ್ನಿ ವಿಜಯಲಕ್ಷ್ಮಿ

Krishnaveni K
ಮಂಗಳವಾರ, 21 ಮೇ 2024 (12:18 IST)
Photo Courtesy: Twitter
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ ವಿನೇಶ್ ಈಗ ದುಬೈ ಪ್ರವಾಸದಲ್ಲಿದೆ. ವಿದೇಶದಲ್ಲಿ ಪತ್ನಿ ಜೊತೆಗೆ ದರ್ಶನ್ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ‍್ಳುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೊನ್ನೆಯೇ ಪತ್ನಿ, ಪುತ್ರನ ಜೊತೆಗೆ ದರ್ಶನ್ ದುಬೈ ವಿಮಾನವೇರಿದ್ದರು. ಇದೀಗ ದುಬೈನಲ್ಲಿ ತಮ್ಮ ಸ್ನೇಹಿತರ ಬಳಗದೊಂದಿಗೆ ದರ್ಶನ್ ದಂಪತಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ದಂಪತಿ ಹೂಗುಚ್ಛ ವಿನಿಮಯ ಮಾಡಿ ಕೇಕ್ ಕಟ್ ಮಾಡಿಕೊಂಡು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ದರ್ಶನ್ ಗೆ ದುಬೈನಲ್ಲಿ ಸ್ನೇಹಿತರ ಬಳಗವಿದೆ. ಆಗಾಗ ಇಲ್ಲಿಗೆ ತೆರಳುತ್ತಿರುತ್ತಾರೆ. ಇದೀಗ ದುಬೈ ಸ್ನೇಹಿತರ ಮುಂದೆಯೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ನೋಡಿ ದರ್ಶನ್ ಅಭಿಮಾನಿಗಳು ಶುಭಾಷಯಗಳ ಸುರಿಮಳೆಗೈದಿದ್ದಾರೆ.

ಇತ್ತ ದರ್ಶನ್-ವಿಜಯಲಕ್ಷ್ಮಿ ಫೋಟೋ ವೈರಲ್ ಆಗುತ್ತಿದ್ದಂತೇ ದರ್ಶನ್ ಸ್ನೇಹಿತೆ ಪವಿತ್ರಾಗೌಡ ಸೋಷಿಯಲ್ ಮೀಡಿಯಾದಲ್ಲಿ ಕರ್ಮ ಎಂದು ಬರೆದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ವಿಜಯಲಕ್ಷ್ಮಿ ಮತ್ತು ಪವಿತ್ರಾ ಗೌಡ ನಡುವಿನ ಸೋಷಿಯಲ್ ಮೀಡಿಯಾ ವಾರ್ ಅಭಿಮಾನಿಗಳಿಗೆ ಹೊಸತೇನಲ್ಲ. ಈಗ ಪವಿತ್ರಾ ಮೆಸೇಜ್ ಎಲ್ಲರ ಗಮನ ಸೆಳೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments