Select Your Language

Notifications

webdunia
webdunia
webdunia
webdunia

ದರ್ಶನ್‌ಗೆ ಕೇಡು ಬಯಸುವವರನ್ನು ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ: ವಿಜಯಲಕ್ಷ್ಮೀ ಪೋಸ್ಟ್‌

Darshan

Sampriya

ಬೆಂಗಳೂರು , ಬುಧವಾರ, 26 ಜೂನ್ 2024 (19:12 IST)
Photo Courtesy X
ಬೆಂಗಳೂರು: ದರ್ಶನರ ಅನುಪಸ್ಥಿತಿಯಲ್ಲಿ ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ ಮತ್ತು ಕೇಡು ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ವಿಜಯಲಕ್ಷ್ಮೀ ಅವರು ಪೋಸ್ಟ್ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬಂಧಿಯಾಗಿದ್ದಾರೆ. ಇನ್ನು ಅಭಿಮಾನಿಗಳಿಗೆ ಧೈರ್ಯ ತುಂಬಿ ಪೋಸ್ಟ್ ಮಾಡಿದ ವಿಜಯಲಕ್ಷ್ಮೀ ಅವರು ತಾಳ್ಮೆ ಇರಲಿ ನ್ಯಾಯಾಲಯದ ಮೇಲೆ ವಿಶ್ವಾಸವಿಡೋಣ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.  

'ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ 'ಸೆಲೆಬ್ರಿಟಿಗಳನ್ನು' ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮಯದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ'.

ಸತ್ಯಮೇವ ಜಯತೆ!

Share this Story:

Follow Webdunia kannada

ಮುಂದಿನ ಸುದ್ದಿ

ಅಂಗರಕ್ಷಕನಿಂದ ತಳ್ಳಲ್ಲಟ್ಟ ಅಂಗವಿಕಲ ಅಭಿಮಾನಿಯನ್ನು ಭೇಟಿಯಾದ ನಾಗಾರ್ಜುನ್