Publish Date: Wed, 31 Mar 2021 (07:46 IST)
Updated Date: Wed, 31 Mar 2021 (07:47 IST)
ಬೆಂಗಳೂರು: ಕಿರುತೆರೆಯ ಖ್ಯಾತ ಜೋಡಿ ಚಂದನ್ ಕುಮಾರ್-ಕವಿತಾ ಗೌಡ ಕೊನೆಗೂ ತಮ್ಮ ಪ್ರೀತಿ ವಿಚಾರವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದು, ನಿಶ್ಚಿತಾರ್ಥದ ದಿನಾಂಕವನ್ನೂ ಬಹಿರಂಗಪಡಿಸಿದ್ದಾರೆ.
ಇದುವರೆಗೆ ಚಂದನ್-ಕವಿತಾ ಲವ್ ಅಫೇರ್ ಬಗ್ಗೆ ಸಾಕಷ್ಟು ರೂಮರ್ ಗಳು ಹರಿದಾಡುತ್ತಿದ್ದವು. ಆದರೆ ಈಗ ಚಂದನ್ ತಮ್ಮಿಬ್ಬರ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಏಪ್ರಿಲ್ ರಂದು ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಚಂದನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಭರ್ಜರಿ ಖುಷಿ ನೀಡಿದೆ.
ಕೊನೆಗೂ ನಿಮ್ಮಿಬ್ಬರ ಸಂಬಂಧವನ್ನು ಒಪ್ಪಿಕೊಂಡಿರಲ್ಲ. ನಿಮ್ಮಿಬ್ಬರದ್ದು ಸೂಪರ್ ಜೋಡಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಅತ್ತ ಕವಿತಾ ಕೂಡಾ ಚಂದನ್ ಜೊತೆಗಿನ ಫೋಟೋ ಪ್ರಕಟಿಸಿದ್ದಾರೆ. ಇಬ್ಬರೂ ಕಲರ್ಸ್ ಕನ್ನಡ ವಾಹಿನಿಯ ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ನಾಯಕ-ನಾಯಕಿಯಾಗಿ ಅಭಿನಯಿಸಿದ್ದರು.
ಇತ್ತೀಚೆಗೆ ಚಂದನ್ ತಮ್ಮ ತೆಲುಗು ಧಾರವಾಹಿಯಿಂದ ಹೊರಬಂದಿದ್ದರು. ಮದುವೆಗಾಗಿ ಕೆಲವು ದಿನ ಬ್ರೇಕ್ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದರು. ಇದೀಗ ಇಬ್ಬರೂ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ.