ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದಲ್ಲಿ ಜೈಲು ಪಾಲಾಗಿದ್ದ ನಟ ಚೇತನ್ ಕೊನೆಗೂ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಹೈಕೋರ್ಟ್ ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಪ್ರಕರಣದಲ್ಲಿ ಚೇತನ್ ರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ನಡುವೆ ಶುಕ್ರವಾರ ಚೇತನ್ ಗೆ ಜಾಮೀನು ಮಂಜೂರಾಗಿತ್ತು. ಆದರೆ ಮತ್ತೆರಡು ದಿನ ಸರ್ಕಾರಿ ರಜಾವಿದ್ದರಿಂದ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಆದೇಶ ಪ್ರತಿ ಲಭ‍್ಯವಾದ ಬಳಿಕ ನಿನ್ನೆ ಸಂಜೆ ಚೇತನ್ ಜೈಲಿನಿಂದ ಹೊರಬಂದಿದ್ದಾರೆ.