Webdunia - Bharat's app for daily news and videos

Install App

12 ದಿನಗಳಲ್ಲಿ ₹ 500 ಕೋಟಿ ಕ್ಲಬ್‌ ಸೇರಿದ ಛಾವಾ: ಟಾಲಿವುಡ್‌ಗೆ ಎಂಟ್ರಿಯಾಗಲು ಸಜ್ಜಾದ ರಶ್ಮಿಕಾ ಸಿನಿಮಾ

Sampriya
ಬುಧವಾರ, 26 ಫೆಬ್ರವರಿ 2025 (20:03 IST)
Photo Courtesy X
ಹೈದರಾಬಾದ್‌: ಪ್ರೇಮಿಗಳ ದಿನಾಚರಣೆಯಂದ ಬಿಡುಗಡೆಯಾದ ಛಾವಾ ಚಿತ್ರ ಭಾರತ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ. ಕೇವಲ 12 ದಿನಗಳಲ್ಲಿ ಈ ಸಿನಿಮಾ ₹500 ಕೋಟಿ ಕ್ಲಬ್‌ ಸೇರಿಕೊಂಡಿದೆ.

ವಿಕ್ಕಿ ಕೌಶಲ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಇದೇ ಫೆಬ್ರುವರಿ 14ರಂದು ಬಾಲಿವುಡ್‌ನಲ್ಲಿ ಬಿಡುಗಡೆಯಾಗಿರುವ ಈ ಚಿತ್ರ ಬಾಕ್ಸ್‌ ಆಫೀಸ್‌ನಲ್ಲಿ ₹515 ಕೋಟಿಗೂ ಅಧಿಕ ಗಳಿಕೆ ಕಂಡಿದೆ.

ಲಕ್ಷ್ಮಣ ಉಟೇಕರ್ ನಿರ್ದೇಶಿಸಿರುವ ಈ ಸಿನಿಮಾ ಇದೀಗ ಟಾಲಿವುಡ್‌ನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ತೆಲುಗು ಭಾಷೆಯಲ್ಲಿ ಛಾವಾ ಸಿನಿಮಾವನ್ನು ಮಾರ್ಚ್ 7ರಿಂದ ಬಿಡುಗಡೆ ಮಾಡುತ್ತಿದ್ದೇವೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.  

ಮರಾಠಿ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದಿರುವ ಛಾವಾ ಕೃತಿಯನ್ನು ಆಧರಿಸಿ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಕುರಿತ ಚಿತ್ರ ಇದಾಗಿದೆ. ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಇದ್ದಾರೆ. ಬಾಲಿವುಡ್ ನಟ ಅಕ್ಷಯ್ ಖನ್ನಾ ಪ್ರಮುಖ ಪಾತ್ರದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments