ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ ಮತ್ತು ಜೇಮ್ಸ್ ರಿಲೀಸ್ ಆದ ಖುಷಿಯಲ್ಲಿರುವ ಅಭಿಮಾನಿಗಳು ಕರ್ನಾಟಕ ರತ್ನ ಪ್ರಶಸ್ತಿ ಯಾವಾಗ ಪ್ರಧಾನ ಮಾಡುತ್ತೀರಿ ಎಂದು ಸರ್ಕಾರವನ್ನು ಪ್ರಶ್ನಿಸುತ್ತಲೇ ಇದ್ದಾರೆ.
ಈ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಶೀಘ್ರವೇ ದಿನ ನಿಗದಿ ಮಾಡಲಾಗುವುದು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.
ಶೀಘ್ರದಲ್ಲೇ ಈ ಬಗ್ಗೆ ಡಾ.ರಾಜ್ ಕುಟುಂಬದೊಂದಿಗೆ ಚರ್ಚಿಸಲಿದ್ದೇವೆ. ಈ ಸಂಬಂಧ ಒಂದು ಸಮಿತಿ ರಚಿಸಿ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.