Select Your Language

Notifications

webdunia
webdunia
webdunia
webdunia

ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಿವಣ್ಣಗೆ ಕರೆಮಾಡಿ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ShivRajkumar Health, Shivanna Health, Chief Minister Siddaramaiah,

Sampriya

ಬೆಂಗಳೂರು , ಮಂಗಳವಾರ, 24 ಡಿಸೆಂಬರ್ 2024 (18:00 IST)
Photo Courtesy X
ಬೆಂಗಳೂರು:  ಅನಾರೋಗ್ಯದ ನಿಮಿತ್ತ ಇಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕರೆಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಿವಣ್ಣಗೆ ಕರೆ ಮಾಡಿ, ಆತ್ಮವಿಶ್ವಾಸ, ಧೈರ್ಯ ತುಂಬಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.

ಸಿದ್ದರಾಮಯ್ಯ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.

ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ  ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಡರಾತ್ರಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ, ವಿಜಯ್ ದೇವರಕೊಂಡ ಒಂದೇ ವಿಮಾನ ಪ್ರಯಾಣ ಬೆಳೆಸಿದ್ದೆಲ್ಲಿಗೆ