Select Your Language

Notifications

webdunia
webdunia
webdunia
Wednesday, 9 April 2025
webdunia

ಕಿಚ್ಚ ಸುದೀಪ್ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ

ಕಿಚ್ಚ ಸುದೀಪ್
ಬೆಂಗಳೂರು , ಶನಿವಾರ, 23 ಡಿಸೆಂಬರ್ 2017 (07:36 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ಮತ್ತು ಸಮಾಧಿ ಸ್ಥಳ ಅಭಿವೃದ್ಧಿ ಪಡಿಸುವಂತೆ ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಕಿಚ್ಚ ಸುದೀಪ್ ಮನವಿಗೆ ಸರ್ಕಾರ ಸ್ಪಂದಿಸಿದೆ.
 

ಮುಖ್ಯಮಂತ್ರಿಗಳ ಪರವಾಗಿ ಅವರ ಮುಖ್ಯ ಕಾರ್ಯದರ್ಶಿಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ವಿಷಯವನ್ನು ಸ್ವತಃ ಸುದೀಪ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಇತ್ತೀಚೆಗೆ ಸಿಎಂ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಸುದೀಪ್, ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ಸ್ಥಳದ ಭೂ ವಿವಾದವನ್ನು ಬಗೆಹರಿಸಿ, ಆ ಪುಣ್ಯಭೂಮಿಯನ್ನು ಅಭಿವೃದ್ಧಿಗೊಳಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಇದು ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಅಸಮಾಧಾನಕ್ಕೂ ಕಾರಣವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಾಳ್ಮೆ ಕಳೆದುಕೊಂಡ ಹುಚ್ಚ ವೆಂಕಟ್ ಮಾಡಿದ್ದೇನು ಗೊತ್ತಾ…?