Publish Date: Mon, 10 Apr 2017 (10:40 IST)
Updated Date: Mon, 10 Apr 2017 (10:42 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ನಿನ್ನೆಯಷ್ಟೇ ಮೈಸೂರಿನಲ್ಲಿ ಪುನೀತ್ ಅಭಿನಯದ ರಾಜಕುಮಾರ ಚಿತ್ರವನ್ನು ನೋಡಿದ್ದ ಸಿಎಂ ಸಿದ್ದು, ದೂರವಾಣಿ ಮೂಲಕ ಮಾತುಕತೆ ನಡೆಸಿ ಚಿತ್ರದ ಅಭಿನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಿಎಂ ಆಹ್ವಾನದ ಮೇಲೆ ನಿವಾಸಕ್ಕೆ ಆಗಮಿಸಿದ ಪುನೀತ್ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು.
ರಾಜಕುಮಾರ ಸಿನಿಮಾ ನೋಡಿದಾಗ ಸ್ವತಃ ವರನಟ ರಾಜ್ ಕುಮಾರ್ ರನ್ನು ನೋಡಿದಷ್ಟೇ ಖುಷಿಯಾಯಿತು ಎಂದು ಸಿಎಂ ಸಿದ್ದು ನಿನ್ನೆ ಹೊಗಳಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ