Publish Date: Fri, 06 Jul 2018 (14:09 IST)
Updated Date: Fri, 06 Jul 2018 (14:13 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಾಸ್ಯ ನಟ ಮಲ್ಲೇಶ್ ಅವರು ಇಂದು(ಜು.6ರಂದು) ಬೆಳಿಗ್ಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
'ವಠಾರ' ಧಾರಾವಾಹಿ ಮೂಲಕ ನಟನಾ ವೃತ್ತಿಗಿಳಿದ ಹಾಸ್ಯ ನಟ ಮಲ್ಲೇಶ್ ಅವರು ಸುಮಾರು 100 ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಡ್ನಿ ಫೈಲೂರ್ ಹಾಗೂ ಸ್ಟ್ರೋಕ್‌ನಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣದಿಂದ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇಂದು ಅವರು ಆನೇಕಲ್‌ನಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ನಟಿಸಿದ ನಟ ಮಲ್ಲೇಶ್ ಅವರು ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿದ್ದು ತಮ್ಮ ಜೀವನದ ಕಡೇ ಕ್ಷಣದವರೆಗೂ ದರ್ಶನ್ ನೋಡಲು ಪರಿತಪಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ