Daily Horoscope
✕

ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

Webdunia
ಶನಿವಾರ, 7 ಮೇ 2022 (07:44 IST)
ಬೆಂಗಳೂರು : ಸ್ಯಾಂಡಲ್‍ವುಡ್‍ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. 

ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ’ ಸೀರಿಯಲ್ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದ ಮೋಹನ್ ಜೂನೇಜ ಅವರಿಗೆ `ಚೆಲ್ಲಾಟ’ ಚಿತ್ರದ ಮಧುಮಗನ ಪಾತ್ರ ತುಂಬಾ ಖ್ಯಾತಿ ತಂದುಕೊಟ್ಟಿತ್ತು.

ಇತ್ತೀಚೆಗಷ್ಟೇ ಬಿಡುಗಡೆಯಾದ ಕೆಜಿಎಫ್ ಭಾಗ ಒಂದು ಮತ್ತು ಎರಡರಲ್ಲೂ ಪೋಷಕ ನಟನಾಗಿ ಮೋಹನ್ ಜೂನೇಜ ಅವರು ಅಭಿನಯಿಸಿದ್ದರು.

ಸ್ಯಾಂಡಲ್ವುಡ್ನ ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿರುವ ಮೋಹನ್ ಜೂನೇಜ ಅವರು ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ಪತ್ನಿ ಕುಸುಮಾ, ಇಬ್ಬರು ಪುತ್ರರು ಅಕ್ಷಯ್, ಅಶ್ವಿನ್ರನ್ನು ಅಗಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತಿ ಪತಿಗಳಾದ ಅಮೃತಧಾರೆ ಖ್ಯಾತಿಯ ಕಿರುತೆರೆ ಜೋಡಿ ರಾಧಾ ಭಗವತಿ, ರಾಣವ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಸೂಪರ್ ಸ್ಟಾರ್ ಮೋಹನ್ ಲಾಲ್: ಕೇರಳದಲ್ಲಿ ಫುಲ್ ಹಲ್ ಚಲ್

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪುನೀತ್ ಬೆನ್ನಲ್ಲೇ ಮತ್ತೊಬ್ಬ ಪ್ರತ್ಯಕ್ಷ ಸಾಕ್ಷಿ ಕಿರಣ್ ಉಲ್ಟಾ; ದರ್ಶನ್ ಗೇನು ಲಾಭ

ಅಭಿಮಾನಿಗಳ ಕೇಳಿದ್ರೆ ಬಿಡೋದು ಹೇಗೆ… ವಿಮಾನವನ್ನೇ ಮಿನಿ ಸಂಗೀತ ಕಚೇರಿಯನ್ನಾಗಿ ಬದಲಾಯಿಸಿದ ಗಾಯಕ ಸೋನು ನಿಗಮ್ Video

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

ಮುಂದಿನ ಸುದ್ದಿ
Show comments