ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಮಾತಿನ ನಡುವೆ ಗಾದೆಯೊಂದನ್ನು ಬಳಸಿ ಸಂಕಷ್ಟಕ್ಕೀಡಾಗಿದ್ದಾರೆ. ದಲಿತ ಸಮುದಾಯ ಉಪೇಂದ್ರ ವಿರುದ್ಧ ದೂರು ದಾಖಲಿಸಿದೆ.
ಪ್ರಜಾಕೀಯ ಪಕ್ಷದ ಸಂಸ್ಥಾಪಕರಾದ ಉಪೇಂದ್ರ ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶವೊಂದನ್ನು ನೀಡಿದ್ದರು. ತಮ್ಮ ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾತನಾಡುವಾ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂಬ ಗಾದೆಯನ್ನು ಬಳಸಿದ್ದರು.
ಇದು ದಲಿತ ಸಮುದಾಯದವರ ಕೆಂಗಣ್ಣಿಗೆ ಗುರಿಯಾಗಿದೆ. ಉಪೇಂದ್ರ ಹೇಳಿಕೆ ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಈಗ ಉಪೇಂದ್ರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಅಲ್ಲದೆ, ಕೆಲವು ದಲಿತ ಸಂಘಟನೆಗಳು ಉಪೇಂದ್ರ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದಾರೆ. ವಿವಾದಗಳ ಬೆನ್ನಲ್ಲೇ ಉಪೇಂದ್ರ ಸ್ಪಷ್ಟನೆ ನೀಡಿದ್ದು, ಬಾಯ್ತಪ್ಪಿ ಒಂದು ಗಾದೆ ಬಳಸಿದ್ದು, ಅದು ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದರಿಂದ ತಕ್ಷಣವೇ ವಿಡಿಯೋ ಡಿಲೀಟ್ ಮಾಡಿರುತ್ತೇನೆ ಎಂದಿದ್ದಾರೆ.