Publish Date: Thu, 08 Mar 2018 (11:31 IST)
Updated Date: Thu, 08 Mar 2018 (11:35 IST)
ಬೆಂಗಳೂರು : ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರ ಜೊತೆ ಕಾಂಗ್ರೆಸ್ ಶಾಸಕರೊಬ್ಬರ ಪುತ್ರಿ ಪರಾರಿಯಾಗಿರುವ ಮಾಹಿತಿಯೊಂದು ತಿಳಿದುಬಂದಿದೆ.
ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಅವರ ಪುತ್ರಿ ಲಕ್ಷ್ಮೀ ಎಸ್. ನಾಯ್ಕ್ ಹಾಗೂ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ಪರಸ್ಪರ ಪ್ರೀತಿಸುತ್ತಿದ್ದು, ಇದಕ್ಕೆ ಮನೆಯವರು ಒಪ್ಪಿಗೆ ನೀಡದ ಕಾರಣ ಬುಧವಾರ ಬೆಳಿಗ್ಗೆ ಇಬ್ಬರು ಪರಾರಿಯಾಗಿದ್ದಾರೆ.
ಈ ಪ್ರೇಮಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮದುವೆಯಾಗುವ ನಿರ್ಧಾರ ಮಾಡಿರುವುದಾಗಿ ತಿಳಿದುಬಂದಿದ್ದು, ಇದೀಗ ಪೊಲೀಸರು ಇವರಿಬ್ಬರ ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ನ್ಯೂಟೌನ್ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ