Webdunia - Bharat's app for daily news and videos

Install App

ವಿವಾದಾತ್ಮಕ ಹೇಳಿಕೆ: ತೆಲಂಗಾಣ ಸಚಿವೆಗೆ ಮಾತಿನಲ್ಲೇ ತಿವಿದ ನಟಿ ಸಮಂತಾ

Sampriya
ಗುರುವಾರ, 3 ಅಕ್ಟೋಬರ್ 2024 (14:02 IST)
Photo Courtesy X
ಹೈದರಾಬಾದ್: ತೆಲಂಗಾಣ ಅರಣ್ಯ ಮತ್ತು ಪರಿಸರ ಸಚಿವೆ ಕೊಂಡಾ ಸುರೇಖಾ ಅವರ ವಿವಾದಾತ್ಮಕ ಹೇಳಿಕೆಗೆ ನಟಿ ಸಮಂತಾ ಮಾತಿನಲ್ಲಿ ತಿವಿದಿದ್ದಾರೆ.

ವಿಚ್ಛೇದನ ಎನ್ನುವುದು ವೈಯಕ್ತಿಕ ವಿಚಾರ, ದಯವಿಟ್ಟು ರಾಜಕೀಯದಿಂದ ನನ್ನ ಹೆಸರನ್ನು ದೂರವಿಡಿ. ನಾನು ಯಾವಾಗಲೂ  ರಾಜಕೀಯದಿಂದ ದೂರವಿದ್ದೇನೆ. ಹೀಗೆಯೇ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ನಟ ನಾಗಚೈತನ್ಯ ಮತ್ತು ನಟಿ ಸಮಂತಾ ರುತ್‌ ಪ್ರಭು ವಿಚ್ಛೇದನಕ್ಕೆ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ.ರಾಮ ರಾವ್‌ (ಕೆಟಿಆರ್‌) ಕಾರಣ ಎಂಬ ತೆಲಂಗಾಣ ಅರಣ್ಯ ಮತ್ತು ಪರಿಸರ ಸಚಿವೆ ಕೊಂಡಾ ಸುರೇಖಾ ಹೇಳಿಕೆಗೆ ಪ್ರತಿಕ್ರಿಯಿಸಿದ ನಟಿ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ.

ನಮ್ಮ ವಿಚ್ಛೇದನವು ವೈಯಕ್ತಿಕ ವಿಷಯವಾಗಿದೆ. ಅದರ ಬಗ್ಗೆ ಇಂತಹ ಊಹಾಪೋಹದಿಂದ ದೂರವಿರುವಂತೆ ನಾನು ವಿನಂತಿಸುತ್ತೇನೆ. ನಮ್ಮ ನಿರ್ಧಾರ ಪರಸ್ಪರ ಒಪ್ಪಿಗೆಯಿಂದ ಮತ್ತು ಸೌಹಾರ್ದತೆಯಿಂದ ಕೂಡಿತ್ತು. ಯಾವುದೇ ರಾಜಕೀಯ ಪಿತೂರಿಗಳನ್ನು ಒಳಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸುರೇಖಾ ಅವರೇ, ಮಹಿಳೆಯಾಗಿದ್ದುಕೊಂಡು, ಮಹಿಳೆಯರನ್ನು ಹೆಚ್ಚಾಗಿ ಪರಿಗಣಿಸದ ಈ ಸಿನಿ ಉದ್ಯಮದಲ್ಲಿ ಮನೆಯಿಂದ ಹೊರಬಂದು ಕೆಲಸ ಮಾಡಲು ಸಾಕಷ್ಟು ಧೈರ್ಯ ಮತ್ತು ಶಕ್ತಿ ಬೇಕು. ನನ್ನನ್ನು ರೂಪಿಸಿದ ಪಯಣದ ಬಗ್ಗೆ ನನಗೆ ಹೆಮ್ಮೆ ಇದೆ. ದಯವಿಟ್ಟು ಅದನ್ನು ಕ್ಷುಲ್ಲಕವಾಗಿ ನೋಡಬೇಡಿ. ಸಚಿವರಾಗಿ ನಿಮ್ಮ ಮಾತುಗಳಿಗೆ ಒಂದು ತೂಕವಿದೆ ಎನ್ನುವುದನ್ನು ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇನೆ ಎಂದು ತೀಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments