Select Your Language

Notifications

webdunia
webdunia
webdunia
webdunia

ಬಿಗ್‌ಬಾಸ್‌ ಆರಂಭಕ್ಕೆ ದಿನಗಣನೆ: ನಿರೂಪಣೆಯ ಗೊಂದಲದ ಬಗ್ಗೆ ಕಿಚ್ಚ ಸುದೀಪ್‌ ಹೇಳಿದ್ದೇನು

Kiccha Sudeep

Sampriya

ಬೆಂಗಳೂರು , ಶನಿವಾರ, 31 ಆಗಸ್ಟ್ 2024 (14:46 IST)
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ಬಿಗ್‌ಬಾಸ್‌ ಸೀಸನ್ 11 ಗೆ ದಿನಗಣನೆ ಆರಂಭವಾಗಿದೆ.  ಈ ಮಧ್ಯೆ ಬಿಗ್‌ಬಾಸ್‌ ಕನ್ನಡ ಸೀಸನ್ 11ಕ್ಕೆ ಸುದೀಪ್ ನಿರೂಪಕರೇ ಎಂಬ ಬಗ್ಗೆ ಗೊಂದಲ ಮೂಡಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಅವರು ಕಾರ್ಯಕ್ರಮ ನಿರೂಪಣೆ ಮಾಡುವ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್‌ ಮೊದಲ ವಾರದಲ್ಲಿ ಬಿಗ್‌ಬಾಸ್‌ ಕನ್ನಡದ 11 ನೇ ಸೀಸನ್‌ ಪ್ರಸಾರವಾಗಲಿದೆ ಎಂದು ಸುದ್ದಿಯಾಗಿದೆ. ಅದಕ್ಕೂ ಮುನ್ನ ಪ್ರೋಮೋ ರಿಲೀಸ್ ಆಗಲಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್ 11 ರ ಪ್ರೋಮೋ ಶೂಟಿಂಗ್ ಸೆಟ್‌ನಿಂದ ಎರಡು ಫೋಟೋಗಳು ಸೋರಿಕೆಯಾಗಿತ್ತು ಈ ಫೋಟೋಗಳಲ್ಲಿ ಕಿಚ್ಚ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದ್ದು, ಅವರೇ ಈ ಬಾರಿಯೂ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ ಎನ್ನಲಾಗಿತ್ತು. ಇದರಿಂದ ಫ್ಯಾನ್ಸ್ ಕೂಡ ಖುಷಿಯಾಗಿದ್ದರು.

ಈ ಸೀಸನ್ ನಲ್ಲಿ ಬೇರೆ ಆ್ಯಂಕರ್ ನ ನೋಡ್ತಿದ್ದಾರೆ ಎನ್ನುವ ಸುದ್ದಿಗೆ  ಉತ್ತರ ಕೊಟ್ಟ ಕಿಚ್ಚ, ಕಾರ್ಯಕ್ರಮ ನಿರೂಪಣೆ ಮಾಡ್ತೇನೆ ಅಥವಾ ಮಾಡುವುದಿಲ್ಲ ಎಂಬ ಬಗ್ಗೆ ಏನೂ ಹೇಳಿಲ್ಲ. ಆದರೆ  ಅಡ್ಡಗೋಡೆ ಮೇಲೆ ದೀಪವಿಟ್ಟ ಹಾಗೆ ಮಾತನಾಡಿದ  ಸುದೀಪ್, ಬಿಗ್ ಬಾಸ್ ಮಾಡಲು ನಾನು ಎಷ್ಟು ಕಷ್ಟ ಪಡುತ್ತೇನೆ ಗೊತ್ತಾ? ಸಿನಿಮಾಗೆ ಅಂತ ಟೈಂ ಕೊಡ್ಲಾ? ಬಿಗ್ಬಾಸ್ ಗೆ ಅಂತ ಟೈಂ ಕೊಡ್ಲಾ? ಅಥವಾ ನನಗೆ ಅಂತ ಟೈಂ ಕೊಡ್ಲ ಎಂದು ಉತ್ತರಿಸಿ ಗೊಂದಲ ಸೃಷ್ಟಿಸಿದ್ದಾರೆ.

ಹೀಗಾಗಿ ಮತ್ತೆ ಈ ಬಾರಿ ಸುದೀಪ್ ಬಿಗ್‌ಬಾಸ್ ನಿರೂಪಣೆ ಮಾಡ್ತಾರಾ?  ಇಲ್ವಾ? ಅಂತ ಗೊಂದಲ ಹುಟ್ಟಿಕೊಂಡಿದೆ. ಆದರೂ, ಈ ಬಾರಿ ಕೂಡ ಸುದೀಪ್‌ ಅವರೇ ನಿರೂಪಕನಾಗಿರುವುದರಲ್ಲಿ ಅನುಮಾನ ಇಲ್ಲ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮಗಳು ಮಾತ್ರ ನನ್ನ ಜವಾಬ್ಧಾರಿ: ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ರಿಯಾಕ್ಷನ್