ಬಿಗ್ ಬಾಸ್ 12ನೇ ಆವೃತ್ತಿ ಆರಂಭಕ್ಕೆ ದಿನಗಣನೆ: ಈ ಬಾರಿ ಪ್ರೇಕ್ಷಕರಿಗೂ ಕಾದಿದೆ ಬಂಪರ್‌ ಬಹುಮಾನ

Sampriya
ಬುಧವಾರ, 24 ಸೆಪ್ಟಂಬರ್ 2025 (19:18 IST)
Photo Credit X
ಬೆಂಗಳೂರು: ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗಲಿರುವ ಬಿಗ್‌ಬಾಸ್‌ 12ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಸ್ಪರ್ಧಾಳುಗಳಿಗೆ ಮಾತ್ರವಲ್ಲದೆ, ವೀಕ್ಷಕರಿಗೂ ಬಂಪರ್‌ ಬಹುಮಾನ ಗೆಲ್ಲುವ ಅವಕಾಶವಿದೆ. 

ಸೆಪ್ಟೆಂಬರ್ 28ರಂದು ಭಾನುವಾರ ಸಂಜೆ 6 ಗಂಟೆಗೆ ಬಿಗ್‌ಬಾಸ್ ಸೀಸನ್ 12ರ ಗ್ರಾಂಡ್ ಓಪನಿಂಗ್ ಪ್ರಸಾರವಾಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ. ವಾರಾಂತ್ಯದಲ್ಲಿ ರಾತ್ರಿ 9 ಗಂಟೆಯಿಂದ ಪ್ರಸಾರವಾಗಲಿದೆ. 

ಕಳೆದ 11 ಆವೃತ್ತಿಗಳಲ್ಲಿ ಯಶಸ್ವಿಯಾಗಿ ಒಂದು ರಿಯಾಲಿಟಿ ಶೋ ನಡೆಸಿಕೊಟ್ಟ ಬೆರಳೆಣಿಕೆಯ ದಿಗ್ಗಜರಲ್ಲಿ ಒಬ್ಬರೆನಿಸಿದ ಕಿಚ್ಚ ಸುದೀಪ್‌ ಅವರು  ಕಿಚ್ಚ, ಈ ಸಲವೂ ಬಿಗ್ ಬಾಸ್ ಚುಕ್ಕಾಣಿ ಹಿಡಿದು, ತಮ್ಮ ಐಕಾನಿಕ್ ಧ್ವನಿ, ಮೊನಚು ವ್ಯಕ್ತಿತ್ವ, ನಿಬ್ಬೆರಗಾಗಿಸೋ ವೈಖರಿ, ಕಣ್ಸೆಳೆಯೋ ನಗು, ಸಮಸ್ಯೆಗಳನ್ನು ಪರಿಹರಿಸೋ ಚಾಣಾಕ್ಷತೆ, ತಪ್ಪಿದೋರನ್ನ ತಿದ್ದೋ ಗಟ್ಟಿತನ, ಪ್ರತಿ ಬಾರಿ ಅವರು ನೀಡೋ ಸಂದೇಶ ಇವೆಲ್ಲವುದನ್ನೂ ನೋಡೋದಕ್ಕೆ ಪ್ರೇಕ್ಷಕರು ಕಾಯ್ತಿದಾರೆ.

ಈ ಬಾರಿ ಬಿಗ್‌ಬಾಸ್‌ ವೀಕ್ಷಕರಿಗೆ ಆಡುವ ಮಜಾ ನೀಡುವುದಕ್ಕಾಗಿ ‘ಜೀತೋ ಧನ್ ಧನಾ ಧನ್’ ಸ್ಪರ್ಧೆ ಇದೆ. ಎಪಿಸೋಡ್ ಪ್ರಸಾರವಾಗುವ ವೇಳೆ ಜಿಯೋ ಹಾಟ್‌ಸ್ಟಾರ್‌ನಲ್ಲಿ ಕೇಳುವ ಸರಳ ಪ್ರಶ್ನೆಗಳಿಗೆ ಉತ್ತರಿಸಿದರೆ ಚಿನ್ನದ ನಾಣ್ಯವನ್ನು ನಿಮ್ಮದಾಗಿಸಿಕೊಳ್ಳಬಹುದು. 

ಫ್ಯಾನ್ ಝೋನ್‌ನಲ್ಲಿ ಸಕ್ರಿಯರಾಗಿದ್ದರೆ ಸೀಸನ್ ಅಂತ್ಯದಲ್ಲಿ ನಡೆಯುವ ಫಿನಾಲೆಯಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವ ಅವಕಾಶ ಪಡೆಯಬಹುದು. ಈ ಬಾರಿಯೂ ನಿಮ್ಮಿಷ್ಟದ ಸ್ಪರ್ಧಿಗಳನ್ನು ಉಳಿಸುವುದಕ್ಕಾಗಿ ವೋಟ್ ಮಾಡಲು ಜಿಯೋ ಹಾಟ್‌ಸ್ಟಾರ್‌ನಲ್ಲಿ ಆಪ್‌ನಲ್ಲಿ ಮಾತ್ರ ಅವಕಾಶ ಕಲ್ಪಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments