Publish Date: Mon, 02 Nov 2020 (09:23 IST)
Updated Date: Mon, 02 Nov 2020 (09:25 IST)
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಪರ ಚುನಾವಣಾ ಪ್ರಚಾರ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಈಗ ಕೇಸು ದಾಖಲಾಗಿದೆ.
ಚುನಾವಣಾ ಪ್ರಚಾರ ವೇಳೆ ದರ್ಶನ್ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ ಪ್ರಕರಣ ದಾಖಲಿಸಿದೆ. ಪ್ರಚಾರದ ವೇಳೆ ಹಲವಾರು ಜನ ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿರಲಿಲ್ಲ. ಇದರ ವಿಡಿಯೋಗಳನ್ನು ಸಾಕ್ಷ್ಯವಾಗಿ ಪರಿಗಣಿಸಿ ದರ್ಶನ್ ಮೇಲೆ ಕೇಸು ದಾಖಲಿಸಲಾಗಿದೆ ಎಂದು ಬಿಬಿಎಂಪಿ ಕಮಿಷನ್ ಎನ್. ಮಂಜುನಾಥ ಪ್ರಸಾದ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ತಪ್ಪು ಸಾಬೀತಾದರೆ ಒಂದು ವರ್ಷದವರೆಗೂ ಜೈಲು ಶಿಕ್ಷೆ ವಿಧಿಸಬಹುದಾಗಿದೆ.