Webdunia - Bharat's app for daily news and videos

Install App

41 ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್‌ ರಕ್ಷಿತಾ, ಪತ್ನಿಗೆ ಪ್ರೇಮ್ ಸರ್ಪ್ರೈಸ್ ಪಾರ್ಟಿ

Sampriya
ಸೋಮವಾರ, 31 ಮಾರ್ಚ್ 2025 (18:15 IST)
Photo Courtesy X
ಬೆಂಗಳೂರು: ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್‌ ಅವರು ಇಂದು 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.  ಪತ್ನಿ ರಕ್ಷಿತಾಗೆ ಪ್ರೇಮ್ ಅದ್ಧೂರಿಯಾಗಿ ಬರ್ತಡೇ ಪಾರ್ಟಿ ಆಯೋಜಿಸಿದ್ದಾರೆ. ಇದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಕ್ಷಿತಾ ಜನ್ಮದಿನದಂದು ಕೇಕ್ ಕತ್ತರಿಸಿ ಫ್ಯಾಮಿಲಿ ಜೊತೆ ಪಾರ್ಟಿ ಮಾಡಿದ್ದಾರೆ. ಅಮ್ಮ, ಪತಿ ಪ್ರೇಮ್, ಪುತ್ರ ಹಾಗೂ ಸಹೋದರ ರಾಣಾ ದಂಪತಿ ಕೂಡ ಭಾಗಿಯಾಗಿ ಶುಭಹಾರೈಸಿದ್ದಾರೆ.

ಇನ್ನೂ ಕ್ರೇಜಿ ಕ್ವೀನ್‌ಗೆ ಕನ್ನಡದ ನಟ ನಟಿಯರು ಶುಭಕೋರಿದ್ದಾರೆ. ಒಂದು ಕಾಲದಲ್ಲಿ ಕನ್ನಡ ಸಿನಿಮಾ ರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ರಕ್ಷಿತಾ ಅವರು 2007ರಲ್ಲಿ ನಿರ್ದೇಶಕ ಪ್ರೇಮ್ ಅವರನ್ನು ಕೈಹಿಡಿದರು. ಈ ದಂಪತಿಗೆ ಸೂರ್ಯ ಎಂಬ ಮಗನಿದ್ದಾನೆ. ಮದುವೆ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡ ರಕ್ಷಿತಾ ಸದ್ಯ ನಿರ್ಮಾಪಕಿಯಾಗಿ, ರಿಯಾಲಿಟಿ ಶೋ ಜಡ್ಜ್‌ ಆಗಿ ಕಾಣಿಸುಕೊಳ್ಳುತ್ತಿದ್ದಾರೆ.

2002ರಲ್ಲಿ 'ಅಪ್ಪು' ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ರಕ್ಷಿತಾ ನಟನೆಗೆ ಎಂಟ್ರಿ ಕೊಟ್ಟರು. ಅವರು ನಟಿಸಿದ ಮೊದಲ ಸಿನಿಮಾನೇ ಸೂಪರ್ ಹಿಟ್ ಆಗಿತ್ತು. ಕನ್ನಡದ ಜೊತೆ ತೆಲುಗು, ತಮಿಳಿನಲ್ಲಿಯೂ ರಕ್ಷಿತಾ ನಟಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments