Publish Date: Sat, 09 Apr 2022 (20:35 IST)
Updated Date: Sat, 09 Apr 2022 (20:37 IST)
ಬೆಂಗಳೂರು: ಚಿತ್ರಪ್ರೇಮಿಗಳ ಪಾಲಿನ ರಸಿಕ, ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಸಿನಿಮಾ ಕ್ಷೇತ್ರದಲ್ಲಿನ ಅವರ ಸೇವೆ ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ.
ಇದು ಎರಡನೇ ಬಾರಿ ಅವರಿಗೆ ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಲಭಿಸುತ್ತಿದೆ. ಏಪ್ರಿಲ್ 11 ರಂದು ಡಾಕ್ಟರೇಟ್ ಪ್ರಧಾನ ಮಾಡಲಾಗುತ್ತದೆ.