Publish Date: Fri, 08 Mar 2019 (09:08 IST)
Updated Date: Fri, 08 Mar 2019 (09:10 IST)
ಬೆಂಗಳೂರು: ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಡಲಿ ಬಿಡಲಿ, ಮಂಡ್ಯ ಲೋಕಸಭಾ ಚುನಾವಣಾ ಕಣದಿಂದ ಸ್ಪರ್ಧಿಸುವುದು ಗ್ಯಾರಂಟಿ ಎಂದಿರುವ ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾಗೆ ಡಿ ಬಾಸ್ ದರ್ಶನ್ ಬೆಂಬಲ ನೀಡಿದ್ದಾರೆ.
‘ಅಮ್ಮ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅವರ ಜತೆಗೆ ನಾವಿದ್ದೇವೆ. ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆಂದರೆ ನಾವು ಪ್ರಚಾರಕ್ಕೆ ಹೋಗುತ್ತೇವೆ. ನಾನೂ ಅವರ ಮನೆಯವನಂತೆ. ಅವರ ಜತೆಗೆ ನಾನು ಯಾವತ್ತೂ ಇರುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ.
ಸುಮಲತಾ ಅಷ್ಟೇ ಅಲ್ಲ, ಈ ಬಾರಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ಸ್ನೇಹಿತರು, ಹಿತೈಷಿಗಳು ಯಾರೇ ಆಗಿದ್ದರೂ, ಪಕ್ಷ ಯಾವುದೆಂದು ನೋಡದೇ ಕರೆದಾಗ ಪ್ರಚಾರಕ್ಕೆ ಹೋಗುತ್ತೇನೆ. ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ. ನನಗೂ ರಾಜಕೀಯಕ್ಕೂ ಆಗಿಬರಲ್ಲ ಎಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.