sಬೆಂಗಳೂರು: ನಟ ದರ್ಶನ್ ಅವರ ಅಭಿಮಾನಿಗಳ ಹೆಸರಿನಲ್ಲಿ ಅಶ್ಲೀಲ ಮೆಸೇಜ್ ಹಾಗೂ ಬೆದರಿಕೆ ಸಂಬಂಧ ನಟಿ ನೀಡಿದ ದೂರಿನ ಅನ್ವಯ ಇದೀಗ ಪೊಲೀಸರು 43 ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದ ತನಿಖೆಯನ್ನು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದರು.
ಜಂಟಿ ಪೊಲೀಸ್ ಕಮಿಷನರ್ ಮೇಲ್ವಿಚಾರಣೆಯಲ್ಲಿ ಎಸಿಪಿ ದರ್ಜೆಯ ಅಧಿಕಾರಿಯನ್ನು ತನಿಖೆಗೆ ನೇಮಿಸಲಾಗಿದೆ. ಇನ್‌ಸ್ಟಾಗ್ರಾಂನಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದರು.
ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತವನ್ನು ಪಡೆದುಕೊಂಡಿರುವ ಸಿಸಿಬಿ ಪೊಲೀಸರು, ತನಿಖೆಯನ್ನು ಚುರುಕು ಮಾಡಿದ್ದಾರೆ.