ಚೆನ್ನೈ : ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಪ್ರತಿಷ್ಠಿತ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಾಲಿವುಡ್ ನಟ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ನೀಡಿ ಗೌರವಿಸಲಾಗಿದೆ.
ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟರ್ ನಲ್ಲಿ, “ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ಎನಿಸಿಕೊಂಡ ರಜನಿಯವರಿಗೆ 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲು ಸಂತೋಷವಾಗಿದೆ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ರಜನೀಕಾಂತ್ ಅವರು ಬಾಲಚಂದರ್ ಅವರ ಅಪೂರ್ವ ರಾಗಂಗಲ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಮತ್ತು ಕಾಲಿವುಡ್ ನಲ್ಲಿ 45 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಪೂರೈಸಿದ್ದಾರೆ. ಇವರಿ ಭಾಷಾ, ಶಿವಾಜಿ ಮತ್ತು 2.0 ಚಿತ್ರಗಳಲ್ಲಿ ನಟಸಿದ್ದಾರೆ. ಅವರು ಕೊನೆಯ ಬಾರಿ ದರ್ಬಾರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಈಗ ಅವರು ಅನ್ನಾಥೆ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.