Webdunia - Bharat's app for daily news and videos

Install App

ತಮಿಳುನಾಡಿ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ದಳಪತಿ ವಿಜಯ್‌

Sampriya
ಗುರುವಾರ, 22 ಆಗಸ್ಟ್ 2024 (14:19 IST)
Photo Courtesy X
ಚೆನ್ನೈ: ಕಾಲಿವುಡ್‌ನಲ್ಲಿ ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿ ಮನೆಮಾತಾಗಿರುವ ದಳಪತಿ ವಿಜಯ್‌ ಅವರು ತಮಿಳುನಾಡು ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದ್ಧಾರೆ.

ತಮಿಳು ನಟ ವಿಜಯ್‌ ಕೆಲ ತಿಂಗಳ ಹಿಂದೆ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದರು.  ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಸಿದ್ಧತೆ ಆರಂಭಿಸಿದ್ದಾರೆ. ಟಿವಿಕೆ ಪಕ್ಷದ ಕಚೇರಿಯಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅವರು ಪಕ್ಷದ ಧ್ವಜವನ್ನು ಬಿಡುಗಡೆ ಮಾಡಿದರು.  

ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ, ತಮಿಳುನಾಡಿನ ಮಣ್ಣಿನಿಂದ ನಮ್ಮ ಜನರ ಹಕ್ಕುಗಳಿಗಾಗಿ ಶೌರ್ಯದಿಂದ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅಸಂಖ್ಯಾತ ಸೈನಿಕರ ತ್ಯಾಗವನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ತಮಿಳು ಭಾಷೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹುತಾತ್ಮರನ್ನು ಸ್ಮರಣೆ ಮಾಡುತ್ತ ಅವರ ದಾರಿಯಲ್ಲಿ ನಡೆಯುತ್ತೇನೆ. ಭಾರತದ ಸಂವಿಧಾನ ಮತ್ತು ಭಾರತದ ಸಾರ್ವಭೌಮತ್ವದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಧ್ವಜವನ್ನು ಬಿಡುಗಡೆ ಮಾಡಿ ವಿಜಯ್‌ ಹೇಳಿದರು.

ಸಹೋದರತ್ವ, ಸಮಾನತೆ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ನಡೆಯುತ್ತ ಜನರ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ವಿಜಯ್‌ ಹೇಳಿದರು.

2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಸ್ತುತ ಸ್ಟಾಲಿನ್‌ ನೇತೃತ್ವದ ಡಿಎಂಕೆ ಪಕ್ಷ ಅಧಿಕಾರದಲ್ಲಿದೆ. ತಮಿಳುನಾಡಿನಲ್ಲಿ ಡಿಎಂಕೆ, ಅಣ್ಣಾ ಡಿಎಂಕೆ, ಬಿಜೆಪಿ ಬಲಿಷ್ಠವಾಗಿದ್ದು, ಆ ಪಕ್ಷಗಳಿಗೆ ಸೆಡ್ಡು ಹೊಡೆಯಲು ವಿಜಯ್‌ ಸಿದ್ಧತೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments