ಬೆಂಗಳೂರು: ಲವ್ ಮಾಕ್ಟೇಲ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
Photo: Milana Nagaraj Twitter page
ಕಳೆದ ನಾಲ್ಕು ದಿನಗಳಿಂದ ಹಾಸನದ ನಂದಗೋಕುಲ ಕನ್ವೆನ್ಷನ್ ಸೆಂಟರ್ ನಲ್ಲಿ ಇವರಿಬ್ಬರ ಮದುವೆ ಕಾರ್ಯಕ್ರಮಗಳು ನಡೆಯುತ್ತಿವೆ. ಶಾಸ್ತ್ರೋಕ್ತವಾಗಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿವಾಹದ ಬಳಿಕ ಬೆಂಗಳೂರಿನಲ್ಲಿ ಸಿನಿ ಆಪ್ತರಿಗಾಗಿ ರಿಸೆಪ್ಷನ್ ಕಾರ್ಯಕ್ರಮವೂ ನಡೆಯಲಿದೆ.