Webdunia - Bharat's app for daily news and videos

Install App

ಮುದ್ದು ಮಗುವನ್ನು ಬರಮಾಡಿಕೊಂಡ ಮಿಲನಾ ನಾಗರಾಜ್, ಡಾರ್ಲಿಂಗ್ ಕೃಷ್ಣ ದಂಪತಿ

Krishnaveni K
ಗುರುವಾರ, 5 ಸೆಪ್ಟಂಬರ್ 2024 (09:11 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಮಿಲನಾ ನಾಗರಾಜ್ ತಾಯಿಯಾಗಿದ್ದಾರೆ. ಈ ಖುಷಿಯನ್ನು ಪತಿ ಡಾರ್ಲಿಂಗ್ ಕೃಷ್ಣಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

‘ನಮಗೆ ಹೆಣ್ಣು ಮಗುವಾಗಿದೆ. ಅಮ್ಮ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ನೀನು ಅನುಭವಿಸಿದ ನೋವು, ತ್ಯಾಗ ಮತ್ತು ಧೈರ್ಯಕ್ಕೆ ನನಗೆ ಹೆಮ್ಮೆಯಾಗುತ್ತಿದೆ ಮಿಲನಾ. ಈ ತ್ಯಾಗ ಮಾಡುವ ಎಲ್ಲಾ ತಾಯಂದಿರಿಗೂ ದೊಡ್ಡ ಧನ್ಯವಾದಗಳು. ನಿನ್ನನ್ನು ನೋಡಿದ ಮೇಲೆ ನನಗೆ ಮಹಿಳೆಯರ ಮೇಲಿನ ಗೌರವ ಇನ್ನಷ್ಟು ಜಾಸ್ತಿಯಾಗಿದೆ.  ನನಗೀಗ ಹೆಣ್ಣು ಮಗುವಾಗಿದೆ ಹೀಗಾಗಿ ನಾನು ಅದೃಷ್ಟವಂತ’ ಎಂದು ಡಾರ್ಲಿಂಗ್ ಕೃಷ್ಣ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಬಹಳ ವರ್ಷ ಪ್ರೇಮಿಗಳಾಗಿದ್ದ ಜೋಡಿ 2021 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ಮಾರ್ಚ್ ನಲ್ಲಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಇಬ್ಬರೂ ಘೋಷಿಸಿದ್ದರು. ಇದೀಗ ಹೆಣ್ಣು ಮಗುವಿಗೆ ಪೋಷಕರಾದ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ ವುಡ್ ನ ಈ ರಿಯಲ್ ಜೋಡಿ.

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ಮೊದಲಿನಿಂದಲೂ ನಮಗೆ ಹೆಣ್ಣು ಮಗುವಾಗಬೇಕೆಂಬ ಆಸೆಯಿದೆ ಎಂದು ಹೇಳಿಕೊಂಡಿದ್ದರು. ಅದರಂತೆ ಈಗ ಹೆಣ್ಣು ಮಗುವಿನ ಜನನವಾಗಿದೆ. ಈ ಖುಷಿಯ ವಿಷಯ ಹಂಚಿಕೊಳ್ಳುತ್ತಿದ್ದಂತೇ ಸಾಕಷ್ಟು ಜನ ಅವರಿಗೆ ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments