Photo Courtesy: Instagram
ಬೆಂಗಳೂರು: ನಟ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಅವರಿಗೆ ನಟಿ ಅಮೃತಾ ಅಯ್ಯಂಗಾರ್ ಕೂಡಾ ಸಾಥ್ ನೀಡಿದ್ದಾರೆ.
ಶೂಟಿಂಗ್ ನಿಂದ ಬಿಡುವು ಸಿಕ್ಕಾಗಲೆಲ್ಲಾ ಡಾರ್ಲಿಂಗ್ ಕೃಷ್ಣ ದಂಪತಿ ಟೂರ್ ಮಾಡುತ್ತಿರುತ್ತಾರೆ. ಈ ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಅವರಿಗೆ ಅವರ ಗೆಳೆಯರು ಕೂಡಾ ಸಾಥ್ ನೀಡಿದ್ದಾರೆ.
ಥೈಲ್ಯಾಂಡ್ ನಲ್ಲಿ ಅಂಡರ್ ವಾಟರ್ ಸ್ವಿಮ್ಮಿಂಗ್, ಪ್ಯಾರಾ ಸೈಲಿಂಗ್ ಮಾಡುವ ಖುಷಿಯ ಗಳಿಗೆಗಳನ್ನು ಕೃಷ್ಣ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಮೃತಾ ಅಯ್ಯಂಗಾರ್ ಕೃಷ್ಣ ದಂಪತಿಯ ಲವ್ ಮಾಕ್ಟೇಲ್ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಅದೇ ಸ್ನೇಹವನ್ನು ಅವರು ಈಗಲೂ ಮುಂದುವರಿಸಿಕೊಂಡು ಬಂದಿದ್ದಾರೆ.