Webdunia - Bharat's app for daily news and videos

Install App

ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದರೆ ನ್ಯಾಯಾಧೀಶರು ಹೇಳಿದ್ದೇನು

Krishnaveni K
ಮಂಗಳವಾರ, 22 ಅಕ್ಟೋಬರ್ 2024 (14:42 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರ ಪ್ರತಿಕ್ರಿಯೆ ಏನಿತ್ತು ಇಲ್ಲಿದೆ ವಿವರ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ ಸಲಹೆ ಮೇರೆಗೆ ಫಿಸಿಯೋಥೆರಪಿ ಮಾಡಲಾಗುತ್ತಿದೆ.

ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು, ಅವರ ಆರೋಗ್ಯ ಸ್ಥಿತಿ ಬಗ್ಗೆ ಅವರ ಪರ ವಕೀಲರು ಕೋರ್ಟ್ ಗೆ ವಿವರಣೆ ನೀಡಿದ್ದಾರೆ. ದರ್ಶನ್ ಗೆ ತೀವ್ರವಾಗಿ ಬೆನ್ನು ನೋವು ಕಾಡುತ್ತಿದೆ. ಅವರಿಗೆ ನಿನ್ನೆ ವಿಮ್ಸ್ ನಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. ವೈದ್ಯರು ಆಪರೇಷನ್ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಹೀಗಾಗಿ ಜಾಮೀನು ನೀಡಿ ಎಂದು ವಕೀಲರು ಕೋರ್ಟ್ ಗೆ ಹೇಳಿದ್ದಾರೆ.

ಇದಕ್ಕೆ ನ್ಯಾಯಾಧೀಶರು ಅವರ ವೈದ್ಯಕೀಯ ವರದಿ ನೀಡುವಂತೆ ಸೂಚಿಸಿದೆ. ದರ್ಶನ್ ಪರ ವಕೀಲ ಸಿವಿ ನಾಗೇಶ್ ಮನವಿ ಮಾಡಿದರು. ದರ್ಶನ್ ಬೆನ್ನು ಹುರಿ ಸಮಸ್ಯೆಯಿಂದ  ಬಳಲುತ್ತಿದ್ದಾರೆ. ಅವರಿಗೆ ಆಪರೇಷನ್ ಮಾಡಬೇಕಿದೆ ಎಂದಿದ್ದಾರೆ. ಆದರೆ ವೈದ್ಯಕೀಯ ವರದಿ ಮತ್ತು ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅಕ್ಟೋಬರ್ 28 ಕ್ಕೆ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments