ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಒಂದೆಡೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲರೂ ಜಾಮೀನಿಗಾಗಿ ಕೋರ್ಟ್ ನಲ್ಲಿ ಹೋರಾಡುತ್ತಿದ್ದರೆ ಇತ್ತ ರೇಣುಕಾ ಮನೆಯಲ್ಲಿ ಪೂಜೆ ನಡೆಯುತ್ತಿದೆ.
ನಟ ದರ್ಶನ್ ಮತ್ತು ಗ್ಯಾಂಡ್ ಜಾಮೀನು ಅರ್ಜಿಯನ್ನು ಇಂದು ಮತ್ತೊಮ್ಮೆ ಹೈಕೋರ್ಟ್ ವಿಚಾರಣೆಗೊಳಪಡಿಸಿದೆ. ಇಂದು ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಕುಮಾರ್ ಪ್ರತಿವಾದ ಮಂಡಿಸಿದರು. ಮೊನ್ನೆಯಿಂದ ನಟ ದರ್ಶನ್ ಮತ್ತು ಇತರೆ ಆರೋಪಿಗಳ ಪರ ವಕೀಲರು ಜಾಮೀನು ನೀಡುವಂತೆ ವಾದ ಮಂಡಿಸಿದ್ದರು.
ಇಂದು ಪ್ರಸನ್ನಕುಮಾರ್ ಅದಕ್ಕೆ ಪ್ರತಿಯಾಗಿ ವಾದ ಮಂಡಿಸಿದ್ದು ಸಾಕಷ್ಟು ಸಾಕ್ಷ್ಯಗಳಿರುವ ಕಾರಣ ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದಾರೆ. ಆದರೆ ಎ2 ದರ್ಶನ್ ಆರೋಗ್ಯದ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದು ಹೊರಗಿದ್ದಾರೆ. ಆದರೆ ಈಗ ನಾರ್ಮಲ್ ಜಾಮೀನಿಗಾಗಿ ಹೋರಾಟ ನಡೆಸುತ್ತಿದ್ದಾರೆ.
ಒಂದೆಡೆ ದರ್ಶನ್ ಆಂಡ್ ಇತರೆ ಆರೋಪಿಗಳು ಕೋರ್ಟ್ ನಲ್ಲಿ ಜಾಮೀನಿಗಾಗಿ ಹೋರಾಟ ಮಾಡುತ್ತಿದ್ದರೆ ಇತ್ತ ರೇಣುಕಾಸ್ವಾಮಿ ಮನೆಯಲ್ಲಿ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಪೂಜೆ ನಡೆದಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಶ್ರೀಗಳು ಪೂಜೆ ಸಲ್ಲಿಸಿದ್ದಾರೆ.