ದರ್ಶನ್ ಆಂಡ್ ಗ್ಯಾಂಗ್ ಗೆ ಎದೆಯಲ್ಲಿ ಢವ ಢವ: ರೇಣುಕಾಸ್ವಾಮಿ ಕೇಸ್ ನಲ್ಲಿ ಪೊಲೀಸರಿಗೆ ಸಿಕ್ಕಿದೆ ಮತ್ತೊಂದು ಬ್ರಹ್ಮಾಸ್ತ್ರ

Sampriya
ಶುಕ್ರವಾರ, 2 ಆಗಸ್ಟ್ 2024 (16:38 IST)
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪೊಲೀಸರು ಇದೀಗ ಪ್ರಕರಣ ಸಂಬಂಧ ಪ್ರಮುಖ ಸಾಕ್ಷಿವೊಂದು ಲಭ್ಯವಾಗಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನಿಂದ ಹೊರಬರಲು ಪ್ರಯತ್ನಿಸುತ್ತಿರುವ ಬೆನ್ನಲೇ ಅವರಿಗೆ ಇದೀಗ ಶಾಕಿಂಗ್ ಕಾದಿದೆ.

ಕೊಲೆ ನಡೆದ ದಿನದಂದು ಆರೋಪಿಗಳ ಚಲನವಲನವನ್ನು ಗಮನಿಸಿಲು ಇದೀಗ ದರ್ಶನ್ ಮನೆಯ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು  ರಿಟ್ರೀವ್​ ಮಾಡಿದ್ದಾರೆ. ಇದರಿಂದ ಹತ್ಯೆ ಪ್ರಕರಣದಲ್ಲಿ ಈ ಸಾಕ್ಷಿ ಪ್ರಮುಖವಾಗಲಿದ್ದು, ಇದರಿಂದ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ದರ್ಶನ್ ಸೇರಿದಂತೆ 17 ಮಂದಿ ವಿಚಾರಣಾಧೀನ ಕೈದಿಯಾಗಿದ್ದಾರೆ.

ಹತ್ಯೆ ನಡೆದ ಬಳಿಕ ಆರೋಪಿಗಳು ಪ್ರಕರಣದಿಂದ ಬಚಾವ್‌ ಆಗಲು ಸಾಕ್ಷಿ ನಾಶ ಮಾಡಲು ಪ್ರಯತ್ನಿಸಿರುವುದು ತನಿಖೆ ವೇಳೆ ತಿಳಿದುಬಂದಿದೆ. ಅದಲ್ಲದೆ ರೇಣುಕಾಸ್ವಾಮಿ ಹತ್ಯೆ ನಡೆಸಿದ ದಿನದ ದರ್ಶನ್ ಮನೆಯ ಸಿಸಿಟಿವಿ ದೃಶ್ಯವಳಿಗಳನ್ನು ಡಿಲೀಟ್ ಮಾಡಲಾಗಿತ್ತು. ಇದೀಗ ಸಿಐಡಿ ಸೈಬರ್ ತಜ್ಞರಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಈಗ ರಿಟ್ರೀವ್ ಮಾಡಲಾಗಿದೆ. ಇದರಲ್ಲಿ ಪ್ರಮುಖ ಆರೋಪಿಗಳ ಚಲನವಲನ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments