Webdunia - Bharat's app for daily news and videos

Install App

ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಇಂದು ಕೋರ್ಟ್ ಪರೀಕ್ಷೆ: ಡಿಮ್ಯಾಂಡ್ ಲಿಸ್ಟ್ ರೆಡಿ

Krishnaveni K
ಗುರುವಾರ, 12 ಸೆಪ್ಟಂಬರ್ 2024 (08:44 IST)
ಬೆಂಗಳೂರು: ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಲಿದ್ದು, ಮತ್ತೆ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ. ಇದರ ಜೊತೆಗೆ ದರ್ಶನ್ ಡಿಮ್ಯಾಂಡ್ ಲಿಸ್ಟ್ ಕೂಡಾ ರೆಡಿಯಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನಲೆಯಲ್ಲಿ ಎಲ್ಲಾ ಆರೋಪಿಗಳನ್ನು ಒಂದೊಂದು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದಾದ ಬಳಿಕ ಮೊನ್ನೆಯಷ್ಟೇ ದರ್ಶನ್ ಆಂಡ್ ಗ್ಯಾಂಗ್ ಆಯಾ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು.

ಇಂದು ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಮತ್ತೆ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ. ಈ ಬಾರಿಯೂ ಎಲ್ಲರೂ ವಿಡಿಯೋ ಕಾನ್ಫರೆನ್ಸ್ ಮೂಲಕವೇ ನ್ಯಾಯಾಂಧೀಶರ ಮುಂದೆ ಹಾಜರಾಗಲಿದ್ದಾರೆ. ಈ ಬಾರಿ ಕೆಲವು ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ. ಆದರೆ ಪ್ರಮುಖ ಆರೋಪಿಗಳಿಗೆ ಅಷ್ಟು ಸುಲಭವಾಗಿ ಜಾಮೀನು ಸಿಗದು.

ಹೀಗಾಗಿ ದರ್ಶನ್ ಬಳ್ಳಾರಿ ಜೈಲಿನಿಂದ ಬೆಂಗಳೂರು ಸಮೀಪದ ಬೇರೆ ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡುವ ಸಾಧ್ಯತೆಯಿದೆ. ಇನ್ನು, ಬಳ್ಳಾರಿ ಜೈಲಿನಲ್ಲಿ ದರ್ಶನ್ ಊಟ,ತಿಂಡಿ ಸೇರುತ್ತಿಲ್ಲ ಎಂದು ಚಡಪಡಿಸುತ್ತಿದ್ದಾರೆ. ಹೀಗಾಗಿ ಮನೆ ಊಟಕ್ಕಾಗಿ ಮತ್ತೆ ಮನವಿ ಮಾಡಬಹುದು. ಹೀಗಾಗಿ ಇಂದು ಕೋರ್ಟ್ ಮುಂದೆ ದರ್ಶನ್ ಆಂಡ್ ಗ್ಯಾಂಗ್ ಯಾವೆಲ್ಲಾ ಬೇಡಿಕೆ ಮಂಡಿಸಬಹುದು ಎಂಬುದೂ ಕುತೂಹಲಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ವರ್ಷಗಟ್ಟಲೆ ತೆಗೆದುಕೊಳ್ಳಲ್ಲ: ಹೊಸ ಟ್ರೆಂಡ್ ಶುರು ಮಾಡ್ತಾರಾ ಕಿಚ್ಚ

ಮುಂದಿನ ಸುದ್ದಿ
Show comments