Select Your Language

Notifications

webdunia
webdunia
webdunia
webdunia

ದರ್ಶನ್ ಜಾಮೀನು ಅರ್ಜಿ ವಿಚಾರಣೆ: ನಾಳೆಗೆ ಮುಂದೂಡಿದ ಕೋರ್ಟ್‌

Darshan Application Bail Hearing

Sampriya

ಬೆಂಗಳೂರು , ಸೋಮವಾರ, 28 ಅಕ್ಟೋಬರ್ 2024 (18:22 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ  ವಿಚಾರಣೆಯನ್ನು ಸೋಮವಾರ ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ.

ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಜಾಮೀನು ನಿರಾಕರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ದರ್ಶನ್‌ ಪರ ವಕೀಲರು ಅನಾರೋಗ್ಯ ಕಾರಣ ನೀಡಿ ಹೈಕೋರ್ಟ್‌ಗೆ ತುರ್ತು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, ಆರೋಪಿ ದರ್ಶನ್ ಅವರ ಆರೋಗ್ಯದ ಬಗ್ಗೆ ಬಳ್ಳಾರಿ ಜೈಲು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಇನ್ನು ಪತ್ನಿ ಹಾಗೂ ಜೈಲು ಅಧಿಕಾರಿಗಳ ಸಲಹೆಯಂತೆ ದರ್ಶನ್ ಅವರು ವಿಮ್ಸ್‌ ಆಸ್ಪತ್ರೆಯಲ್ಲಿ ಬೆನ್ನಿನ ಸ್ಕ್ಯಾನಿಂಗ್‌ಗೆ ಒಳಪಟ್ಟಿದ್ದರು.

ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ ದರ್ಶನ್‌ಗೆ ತೀವ್ರವಾದ ಸಮಸ್ಯೆ ಇರುವುದು ದೃಢಪಟ್ಟಿದೆ. ಈಚೆಗೆ ದರ್ಶನ್ ಮನೆಯವರು ತಂದುಕೊಡುವ ಬ್ಯಾಗ್‌ ಅನ್ನು ಎತ್ತಿಕೊಂಡು ಹೋಗಲು ಪರದಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್‌ಬಾಸ್ ಮನೆಯಲ್ಲಿ ಮೋಕ್ಷಿತಾ ಹೊಸ ಅವತಾರಕ್ಕೆ ದಂಗಾದ ಸ್ಪರ್ಧಿಗಳು