Publish Date: Wed, 30 Oct 2024 (08:42 IST)
Updated Date: Wed, 30 Oct 2024 (08:45 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಬಂಧಿತರಾಗಿರುವ ನಟ ದರ್ಶನ್ ಜಾಮೀನು ಅರ್ಜಿ ಭವಿಷ್ಯ ಇಂದು ತೀರ್ಮಾನವಾಗಲಿದೆ. ಅವರಿಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದೆ.
ಕೆಳಹಂತದ ಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಕಾರಣ ಅವರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಅದು ದರ್ಶನ್ ಪಾಲಿಗೆ ವರವಾಗಿದೆ.
ಇದೇ ವಿಚಾರವನ್ನಿಟ್ಟುಕೊಂಡು ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ಮಧ್ಯಂತರ ಜಾಮೀನು ಕೊಡಿ ಎಂದು ಮನವಿ ಮಾಡಿದ್ದಾರೆ. ನಿನ್ನೆ ಎಸ್ ಪಿಪಿ ಪ್ರಸನ್ನ ಕುಮಾರ್ ಪ್ರತಿವಾದದ ವೇಳೆ ಜಡ್ಜ್ ಕೂಡಾ ಚಿಕಿತ್ಸೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದಂತೆ ಕಂಡುಬಂದಿದೆ. ಹೀಗಾಗಿ ಅವರಿಗೆ ಇಂದು ಜಾಮೀನು ಸಿಗುವ ನಿರೀಕ್ಷೆಯಿದೆ.
ಪರ-ವಿರೋಧ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದಾರೆ. ಹೀಗಾಗಿ ದರ್ಶನ್ ಪಾಲಿಗೆ ಇಂದು ಮಹತ್ವದ ದಿನವಾಗಿದೆ. ಒಂದು ವೇಳೆ ಅವರಿಗೆ ಇಂದು ಜಾಮೀನು ಸಿಕ್ಕರೆ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸ್ವಾಗತಿಸಲು ಸಿದ್ಧರಾಗಿ ನಿಂತಿದ್ದಾರೆ.